ಬಂಧನ ತುರ್ತುಸ್ಥಿತಿಗಿಂತ ಹೀನಾಯ : ಶಿವಕುಮಾರ್

Webdunia
ಬುಧವಾರ, 15 ಜೂನ್ 2022 (10:44 IST)
ಬೆಂಗಳೂರು : ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ರಾಹುಲ್ಗಾಂಧಿ ಅವರಿಗೆ ಇಡಿ ಸಮನ್ಸ್ ಜಾರಿಗೊಳಿಸಿ ವಿಚಾರಣೆ ನಡೆಸಿರುವುದನ್ನು ಖಂಡಿಸಿ,

ದೆಹಲಿಯ ಎಐಸಿಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ನಾಯಕರನ್ನು ಬಂಧಿಸಿರುವುದು ನೀಚ ರಾಜಕಾರಣ, ಇದು ತುರ್ತು ಪರಿಸ್ಥಿತಿಗೂ ಮೀರಿದ ಹೀನಾಯ ಸ್ಥಿತಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ನಮ್ಮ ನಾಯಕರು ಯಾವುದೇ ತಪ್ಪು ಮಾಡಿಲ್ಲ. ಅಂದ ಮೇಲೆ ನಮ್ಮ ನಾಯಕರಿಗೆ ಸಮನ್ಸ್ ಜಾರಿ ಮಾಡಿರುವುದನ್ನು ನಾವು ವಿರೋಧಿಸುವುದು, ಪ್ರತಿಭಟಿಸುವುದು ನ್ಯಾಯಬದ್ಧವಾಗಿದೆ.

ಪ್ರತಿಭಟನೆ ಮಾಡುವುದು ಈ ದೇಶದ ಪ್ರತಿಯೊಬ್ಬ ನಾಗರಿಕನ ಹಕ್ಕು. ಆದರೆ, ಬಿಜೆಪಿ ನಮಗೆ ಪ್ರತಿಭಟಿಸುವ ಅವಕಾಶವನ್ನೂ ನೀಡದೆ ಹೊಸ ಸಂಪ್ರದಾಯ ಆರಂಭಿಸಿದೆ. ನೆಹರೂ ಕುಟುಂಬದವರ ವಿರುದ್ಧ ದ್ವೇಷದ ರಾಜಕಾರಣ ಮಾಡುತ್ತಿದೆ. ಇಂತಹ ನೀಚ ರಾಜಕಾರಣವನ್ನು ಹಿಂದೆಂದೂ ಕಂಡಿಲ್ಲ.

ಇದು ತುರ್ತು ಪರಿಸ್ಥಿತಿಗೂ ಮೀರಿದ ಹೀನಾಯ ಸ್ಥಿತಿ. ನಾವಿದನ್ನು ಉಗ್ರವಾಗಿ ಖಂಡಿಸುತ್ತೇವೆ. ಇದಕ್ಕೆಲ್ಲಾ ನಾವು ಹೆದರುವುದಿಲ್ಲ. ನಮ್ಮ ಹೋರಾಟ ನಿಲ್ಲುವುದಿಲ್ಲ’ ಎಂದು ಹೇಳಿದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಲಿಫ್ಟ್‌ನೊಳಗೆ ಹೊಡೆದಾಡಿಕೊಂಡ ಅಪಾರ್ಟ್‌ಮೆಂಟ್‌ ನಿವಾಸಿಗಳು, ವೈರಲ್ ವಿಡಿಯೋ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕೇತನ್ ಅಗರ್ವಾಲ್ ಹತ್ಯೆ ಆರೋಪಿ ಸಿಯಾ ಗೋಯಲ್ ಕುಟುಂಬಕ್ಕೆ ಶಾಕ್ ನೀಡಿದ ಎಫ್ ಡಿಎ ಅಧಿಕಾರಿಗಳು

ಮದುವೆ ಮಂಟಪದಿಂದಲೇ ಸೀದಾ ಹಳೇ ಟೀಚರ್ ಮನೆಗೆ ಓಡಿದ ಡೆಲಿವರಿ ಬಾಯ್: ಕಾರಣ ತಿಳಿದ್ರೆ ಶಾಕ್ ಆಗ್ತೀರಿ Video

ಹಿಂದೂ ವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಬೃಹತ್ ಪ್ರತಿಭಟನೆ : ವಿಜಯೇಂದ್ರ

ಮುಂದಿನ ಸುದ್ದಿ
Show comments