Publish Date: Fri, 24 Aug 2018 (20:08 IST)
Updated Date: Fri, 24 Aug 2018 (20:11 IST)
ನಾಡಿನಾದ್ಯಂತ ಶ್ರದ್ಧಾ ಭಕ್ತಿಗಳಿಂದ ಆಚರಿಸಲ್ಪಡುತ್ತಿರುವ ವರ ಮಹಾಲಕ್ಷ್ಮಿ ಹಬ್ಬದ ಅಂಗವಾಗಿ ರಾಜ್ಯದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಗ್ರಾಮದಲ್ಲಿ ದೇವಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.
ತುಮಕೂರು ಜಿಲ್ಲೆಯ ಗೂರವನಹಳ್ಳಿ ಪ್ರಸಿದ್ಧ ಧಾರ್ಮಿಕ ಕೇಂದ್ರಗಳಲ್ಲಿ ಒಂದು. ಇಲ್ಲಿನ ಶ್ರೀ ಮಹಾಲಕ್ಷ್ಮಿ ದೇವಿಗೆ ವಿಶೇಷ ಪೂಜೆ, ಹೋಮ, ಹೂವಿನ ಅಲಂಕಾರ, ಅಭಿಷೇಕ, ಅಷ್ಟ್ರೋತ್ರ, ಸಹಸ್ರನಾಮ ವಿವಿಧ ಪೂಜಾ ಕೈಂಕರ್ಯಗಳು ನಡೆದವು.
ವರ ಮಹಾಲಕ್ಷ್ಮೀ ಹಬ್ಬದ ಅಂಗವಾಗಿ ನಾಡಿನ ವಿವಿಧೆಡೆಗಳಿಂದ ಆಗಮಿಸಿದ ಭಕ್ತಾದಿಗಳು ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದುಕೊಂಡರು. ತಮ್ಮ ಭಕ್ತಿ ಸಮರ್ಪಿಸಿದರು.
ದೇವಿ ದರ್ಶನಕ್ಕೆ ಆಗಮಿಸಿದ ಹೆಣ್ಣುಮಕ್ಕಳು ಸೀರೆ, ಬಳೆ, ಮಡ್ಲಕ್ಕಿ, ಹೂಗಳು ದೇವಿಗೆ ಸಮರ್ಪಿಸಿ ತಮ್ಮ ಇಷ್ಟಾರ್ಥ ಗಳನ್ನು ಈಡೇರಿಸುವಂತೆ ಪ್ರಾರ್ಥನೆ ಸಲ್ಲಿಸಿದರು.