Select Your Language

Notifications

webdunia
webdunia
webdunia
webdunia

ಹಿರಿಯ ಲೇಖಕ ಡಿಎಸ್ ನಾಗಭೂಷಣ ಇನ್ನಿಲ್ಲ

writer dc nagabhushan bengaluru ಬೆಂಗಳುರು ಡಿಸಿ ನಾಗಭೂಷಣ್ ಸಾಹಿತಿ
bengaluru , ಗುರುವಾರ, 19 ಮೇ 2022 (14:38 IST)
ಹಿರಿಯ ಲೇಖಕ, ಸಮಾಜವಾದಿ ಚಿಂತಕ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಡಿ.ಎಸ್. ನಾಗಭೂಷಣ ಅವರು ಇಂದು ನಿಧನರಾಗಿದ್ದಾರೆ.
ಶಿವಮೊಗ್ಗದ ಕಲ್ಲಹಳ್ಳಿಯಲ್ಲಿ ನೆಲೆಸಿದ್ದ ನಾಗಭೂಷಣ ಅವರಿಗೆ 70 ವರ್ಷ ವಯಸ್ಸಾಗಿತ್ತು.ಮೃತರ ಅಂತ್ಯಕ್ರಿಯ ಇಂದು ಸಂಜೆ 4 ಗಂಟೆಗೆ ಶಿವಮೊಗ್ಗದ ರೋಟರಿ ಚಿತಾಗಾರದಲ್ಲಿ ನಡೆಯಲಿದೆ.
ನೇರ ನಡೆ, ನುಡಿ, ನಿಷ್ಠುರ ವ್ಯಕ್ತಿ ತತ್ವದ ಡಿಎಸ್ ನಾಗಭೂಷಣ್ ಸಾರ್ವಜನಿಕ ಬದುಕಿನಲ್ಲಿ ತೋರಬೇಕಾದ ಬದ್ದತೆ, ಪ್ರಾಮಾಣಿಕತೆಗೆ ಮಾದರಿಯಾಗಿದ್ದರು.  ಡಿ.ಎಸ್.ನಾಗಭೂಷಣ್ ನಿಧನಕ್ಕೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರ ಶೋಕ ವ್ಯಕ್ತಪಡಿಸಿದ್ದಾರೆ.
ಅನ್ಯಾಯ,‌ ಅಸಮಾನತೆ ಮತ್ತು ಆತ್ಮವಂಚಕ ನಡವಳಿಕೆಗಳ ವಿರುದ್ಧದ ಹೋರಾಟಕ್ಕೆ, ಸಮಾಜವಾದಿ ಚಿಂತನೆಗಳನ್ನು ಅಸ್ತ್ರವಾಗಿ ಬಳಸುತ್ತಾ ಬಂದಿದ್ದ ಆತ್ಮೀಯರಾಗಿದ್ದ ಡಿ.ಎಸ್.ನಾಗಭೂಷಣ್ ಅವರ ಅಗಲಿಕೆಯಿಂದ ಆಘಾತಕ್ಕೀಡಾಗಿದ್ದೇನೆ.
ಮೃತರು ಪತ್ನಿ‌ ಮತ್ತು ಗೆಳೆಯರ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ. ಅವರ ಎಲ್ಲ ಕೃತಿಗಳ ಮೂಲಕ ನಾಗಭೂಷಣ್ ನಮ್ಮ ನೆನಪಲ್ಲಿ‌ ಸದಾ ಹಸಿರಾಗಿರುತ್ತಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಳೆ ಪೀಡಿತ ಬೆಂಗಳೂರಿನಲ್ಲಿ ಸಿಎಂ ಬೊಮ್ಮಾಯಿ ರೌಂಡ್ಸ್