Webdunia - Bharat's app for daily news and videos

Install App

Yadagiri: ಕಾಂಗ್ರೆಸ್ ಕಚೇರಿಗೆ ಬೆಂಕಿಯಿಟ್ಟ ಪ್ರಕರಣಕ್ಕೆ ಬಿಗ್‌ಟ್ವಿಸ್ಟ್‌

Sampriya
ಸೋಮವಾರ, 26 ಮೇ 2025 (18:12 IST)
ಯಾದಗಿರಿ: ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಬೆಂಕಿಯಿಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಯಾದಗಿರಿ ನಗರ ಪೊಲೀಸರು ರೌಡಿಶೀಟರ್ ಸೇರಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.

ಯಾದಗಿರಿ ಜಿಲ್ಲಾ ಮಹಿಳಾ ಘಟಕದ ಮಾಜಿ ಅಧ್ಯಕ್ಷೆ ಮಂಜುಳಾ ಗೂಳಿಯ ಬೆಂಬಲಿಗನಾಗಿದ್ದ ಆರೋಪಿ ರೌಡಿಶೀಟರ್ ಬಾಬುಗೌಡ ಅಗತೀರ್ಥ ಹಾಗೂ ಮಂಜುಳಾ ಪತಿ ಶಂಕರ್ ಅವರನ್ನು ವಶಕ್ಕೆ ಪಡೆಯಲಾಗಿದೆ. ಮಂಜುಳಾ ಗೂಳಿ ಅವರಿಗೆ ಈ ಬಾರಿ ಅಧ್ಯಕ್ಷ ಸ್ಥಾನ ಕೈ ತಪ್ಪಿದ್ದರಿಂದ ಕೋಪಗೊಂಡು ಶಂಕರ್ ಗೂಳಿ ಹಾಗೂ ರೌಡಿಶೀಟರ್ ಸೇರಿಕೊಂಡು ಮೇ 24ರಂದು ರಾತ್ರಿ 1 ಗಂಟೆ ಸುಮಾರಿಗೆ ಸ್ಕೂಟಿಯಲ್ಲಿ ಬಂದು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದರು.

ಬೆಂಕಿಯಿಟ್ಟ ಬಳಿಕ ತಲೆಮರೆಸಿಕೊಂಡು, ಆಂಧ್ರಪ್ರದೇಶದ ವಿಜಯವಾಡದಲ್ಲಿ ತನ್ನ ಗೆಳೆಯನ ಮನೆಯಲ್ಲಿ ಅಡಗಿ ಕುಳಿತಿದ್ದ ಆರೋಪಿ ರೌಡಿಶೀಟರ್‌ನನ್ನು ಯಾದಗಿರಿ ನಗರ ಪೊಲೀಸರು ಬಂಧಿಸಿದ್ದಾರೆ. ಇನ್ನೂ ಈಗಾಗಲೇ ಇನ್ನೋರ್ವ ಆರೋಪಿ ಶಂಕರ್‌ನನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.

ಪ್ರಕರಣ ಹಿನ್ನೆಲೆ: ಯಾದಗಿರಿ ನಗರದ ಕನಕ ವೃತ್ತದ ಬಳಿಯಿರುವ ಕಾಂಗ್ರೆಸ್ ಕಚೇರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದರು. ಪರಿಣಾಮ ಕಚೇರಿಯಲ್ಲಿದ್ದ ಸೋಪಾ, ಎಸಿ ಎಲ್ಲವೂ ಸುಟ್ಟು ಭಸ್ಮವಾಗಿದ್ದವು. ಕಚೇರಿಗೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ, ಡಾಗ್ ಸ್ಕ್ವಾಡ್, ಬೆರಳಚ್ಚು ತಜ್ಞರು ಸೇರಿ ಪರಿಶೀಲನೆ ನಡೆಸಿದ್ದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂಗಳಿಗೆ ಹೀಗೇ ತೊಂದರೆ ಕೊಡುತ್ತಿದ್ದರೆ ಬಿಜೆಪಿ ಕೈಕಟ್ಟಿ ಕೂರಲ್ಲ: ಬಿವೈ ವಿಜಯೇಂದ್ರ

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ಇಂದು ನಿರಾಸೆ

Gold Price today: ಚಿನ್ನದ ದರ ಕೇಳಿದ್ರೆ ಇಂದು ಶಾಕ್ ಆಗ್ತೀರಿ

Kanimozhi: ಭಾರತದ ರಾಷ್ಟ್ರಭಾಷೆ ಯಾವುದು, ಸಂಸದೆ ಕನಿಮೊಳಿ ಕೊಟ್ಟ ಉತ್ತರದ ವಿಡಿಯೋ ಈಗ ವೈರಲ್

Mangaluru: ದಕ್ಷಿಣ ಕನ್ನಡ ಜಿಲ್ಲೆಯಿಂದ 21 ಹಿಂದೂ ನಾಯಕರು, 15 ಮುಸ್ಲಿಂ ನಾಯಕರು ಗಡೀಪಾರು

ಮುಂದಿನ ಸುದ್ದಿ
Show comments