Select Your Language

Notifications

webdunia
webdunia
webdunia
webdunia

ಯಾದಗಿರಿ: ಕಲುಷಿತ ನೀರು ಸೇವನೆ, ಮೂವರು ಸಾವು, ಹಲವರು ಅಸ್ವಸ್ಥ

ಯಾದಗಿರಿ ಕಲುಷಿತ ನೀರು

Sampriya

ಯಾದಗಿರಿ , ಸೋಮವಾರ, 7 ಜುಲೈ 2025 (14:53 IST)
Photo Credit X
ಯಾದಗಿರಿ: ಜಿಲ್ಲೆಯ ಸುರಪುರ ತಾಲೂಕಿನ ತಿಪ್ಪನಟಗಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಮೂವರು ಮೃತಪಟ್ಟು, 6 ಮಂದಿಯ ಆರೋಗ್ಯ ಗಂಭೀರ ಸ್ಥಿತಿಯಲ್ಲಿದೆ. ಮೃತರನ್ನು ದೇವಿಕೆಮ್ಮ ಹೊಟ್ಟಿ (48), ವೆಂಕಮ್ಮ (60), ರಾಮಣ್ಣ ಪೂಜಾರಿ (50) ಎಂದು ಗುರುತಿಸಲಾಗಿದೆ.

10 ದಿನಗಳ ಹಿಂದೆ ಕಲುಷಿತ ನೀರು ಸೇವಿಸಿ ತಿಪ್ಪನಟಗಿ ಗ್ರಾಮಸ್ಥರು ವಾಂತಿ-ಭೇದಿಯಿಂದ ಬಳಲಿ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೂವರು ಕೊನೆಯುಸಿರೆಳೆದಿದ್ದಾರೆ. 

ಇನ್ನೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆರು ಮಂದಿಯ ಆರೋಗ್ಯ ಗಂಭೀರವಾಗಿದ್ದು, ಹಲವರ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ. ಇನ್ನೂ 20 ಜನ ಅಸ್ವಸ್ಥ ಸ್ಥಿತಿಯಲ್ಲಿದ್ದಾರೆ. ತಿಪ್ಪನಟಗಿ ಗ್ರಾಮಕ್ಕೆ ಸುರಪುರ ತಾಲೂಕು ಆರೋಗ್ಯ ಅಧಿಕಾರಿ ರಾಜಾ ವೆಂಕಟಪ್ಪ ನಾಯಕ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

26/11 ಮುಂಬೈ ದಾಳಿ: ಮಾಸ್ಟರ್ ಮೈಂಡ್ ರಾಣಾ ಬಾಯಿಂದ್ದ ಹೊರಬಿತ್ತು ಭಯಾನಕ ಸತ್ಯ