Webdunia - Bharat's app for daily news and videos

Install App

ಕಂಸ ಯಾರು ಅರ್ಜುನ ಯಾರು ಮುಂದೆ ತಿಳಿಯಲಿದೆ: ಈಶ್ವರಪ್ಪ ವಿರುದ್ಧ ಯಡ್ಡಿಯೂರಪ್ಪ ಗುಡುಗು

Webdunia
ಬುಧವಾರ, 28 ಡಿಸೆಂಬರ್ 2016 (13:44 IST)
ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಅವರು ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ನಲ್ಲಿ ನಿರತರಾಗಿರುವುದರಿಂದ ಅವರನ್ನು ಬರ ಅಧ್ಯಯನ ತಂಡದಿಂದ ಕೈಬಿಡಲಾಗಿದೆ. ನಮಗೆ ಅವರ ಮೇಲೆ ಯಾವುದೇ ದ್ವೇಷಯಿಲ್ಲ. ನನ್ನ ಬಗ್ಗೆ ಕಂಸ ಎಂದು ಹೇಳಿಕೆ ನೀಡಿದ್ದಾರೆ. ಆದರೆ, ಮುಂದಿನ ದಿನಗಳಲ್ಲಿ ಕಂಸ ಯಾರು ಅರ್ಜುನ ಯಾರು ಎಂದು ತಿಳಿಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ. 
 
ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀ ಶಿವಕುಮಾರ್ ಅವರ ಆಶೀರ್ವಾದ ಪಡೆದು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಅವರು ಸ್ವತಂತ್ರವಾಗಿ ಬರ ಅಧ್ಯಯನ ನಡೆಸುತ್ತಿದ್ದಾರೆ. ಅದಕ್ಕೆ ನಮ್ಮ ವಿರೋಧ ಇಲ್ಲ. ಅವರು ನಮಗಿಂತ ಹೆಚ್ಚು ಆಸಕ್ತಿಯಿಂದ ಬರ ಅಧ್ಯಯನ ನಡೆಸುತ್ತಿದ್ದಾರೆ. ನಾವು ಸಹ ಅವರಷ್ಟು ಓಡಾಡುತ್ತಿಲ್ಲ ಎಂದರು. 
 
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಕೊಲೆ ಸುಲಿಗೆ ಅಂತಹ ಪ್ರಕರಣಗಳು ಹೆಚ್ಚಾಗುತ್ತಿವೆ. ಕಾನೂನು ಸುವ್ಯವಸ್ಥೆ ಕಾಯ್ದುಕೊಳ್ಳಲು ರಾಜ್ಯ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದು ವಾಗ್ದಾಳಿ ನಡೆಸಿದರು.  
 
ರಾಜ್ಯದಲ್ಲಿ ಬರ ಅಧ್ಯಯನ ನಡೆಸಲು ರಾಜ್ಯ ಬಿಜೆಪಿ ಘಟಕ 3 ತಂಡಗಳನ್ನು ರಚಿಸಿದೆ. ರಾಯಣ್ಣ ಬ್ರಿಗೇಡ್ ಸ್ಥಾಪಿಸುವ ಮೂಲಕ ಬಿಎಸ್‌ವೈ ಕೆಂಗಣ್ಣಿಗೆ ಗುರಿಯಾದ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಅವರಿಗೆ ಬರ ಅಧ್ಯಯನ ತಂಡದಿಂದ ಕೊಕ್ ನೀಡಲಾಗಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments