Select Your Language

Notifications

webdunia
webdunia
webdunia
webdunia

ಒಂದೇ ವಿಮಾನದಲ್ಲಿ ಮರಳಲಿದ್ದಾರೆ ಯಡ್ಡಿ-ಈಶು!

ಒಂದೇ ವಿಮಾನದಲ್ಲಿ ಮರಳಲಿದ್ದಾರೆ ಯಡ್ಡಿ-ಈಶು!
ಬೆಂಗಳೂರು , ಶನಿವಾರ, 28 ಜನವರಿ 2017 (11:50 IST)
ಬಹುದಿನಗಳ ವೈಮನಸ್ಸು ಮರೆತು ಒಂದಾಗಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹಾಗೂ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ, ನವದೆಹಲಿಯಿಂದ ಒಂದೇ ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸಲಿದ್ದಾರೆ. 
ರಾಯಣ್ಣ ಬ್ರಿಗೇಡ್ ಬಿಕ್ಕಟ್ಟಿನಿಂದಾಗಿ ಪರಸ್ಪರ ದೂರವಾಗಿದ್ದ ಉಭಯ ನಾಯಕರನ್ನು ಒಂದುಗೂಡಿಸುವಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸಫಲರಾಗಿದ್ದು, ರಾಜ್ಯ ಬಿಜೆಪಿ ಪಾಳಯದಲ್ಲಿನ ಆಂತರಿಕ ಕಲಹ ತಾತ್ಕಾಲಿಕವಾಗಿ ಶಮನಗೊಂಡಿದೆ. 
 
ನಿನ್ನೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನೇತೃತ್ವದಲ್ಲಿ ನಡೆದ ಸಂಧಾನ ಸಭೆ ಬಳಿಕ ರಾಜ್ಯ ಬಿಜೆಪಿ ಪಾಳಯದಲ್ಲಿ ಉದ್ಭವಿಸಿರುವ ಭಿನ್ನಾಭಿಪ್ರಾಯ ಶಮಗೊಂಡಿದ್ದು, ಬಿ.ಎಸ್.ಯಡಿಯೂರಪ್ಪ ಹಾಗೂ ಕೆ.ಎಸ್.ಈಶ್ವರಪ್ಪ ತಮ್ಮ ವೈಮನಸ್ಸನ್ನು ಮರೆತು ಇಂದು ಒಂದೇ ವಿಮಾನದಲ್ಲಿ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಲಿದ್ದಾರೆ. 
 
ರಾಜ್ಯ ಬಿಜೆಪಿ ಪಾಳಯದಲ್ಲಿ ತಮ್ಮನ್ನು ಕಡೆಗಣಿಸಲಾಗುತ್ತದೆ ಎಂಬ ಕಾರಣಕ್ಕಾಗಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಹೆಸರಿನ ಹೊಸ ಸಂಘಟನೆ ಹುಟ್ಟು ಹಾಕುವ ಮೂಲಕ ಪಕ್ಷದಲ್ಲಿ ತಮ್ಮ ಬಲ ಪ್ರದರ್ಶನ ಮಾಡಲು ಕೆ.ಎಸ್.ಈಶ್ವರಪ್ಪ ಮುಂದಾಗಿದ್ದರು. ಆದರೆ, ಬ್ರಿಗೇಡ್‌ಗೆ ಬಿ.ಎಸ್.ಯಡಿಯೂರಪ್ಪ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಯುಪಿ ಚುನಾವಣೆ: ರಾಹುಲ್, ಅಖಿಲೇಶ್ ಜಂಟಿ ಪ್ರಚಾರ