Publish Date: Wed, 30 Aug 2017 (17:50 IST)
Updated Date: Wed, 30 Aug 2017 (17:54 IST)
ಶಿವರಾಮ ಕಾರಂತ ಬಡಾವಣೆ ಡಿನೋಟಿಫಿಕೇಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸಿಬಿಯಲ್ಲಿ ದಾಖಲಾಗಿರುವ ಎಫ್`ಐಆರ್ ರದ್ದು ಕೋರಿ ಯಡಿಯೂರಪ್ಪ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನ ಹೈಕೋರ್ಟ್ ಏಕಸದಸ್ಯ ಪೀಠ ನಾಳೆಗೆ ಮುಂದೂಡಿದೆ.
ನಾಳೆ ಮಧ್ಯಾಹ್ನ 3 ಗಂಟೆಗೆ ಅರ್ಜಿ ವಿಚಾರಣೆ ಮುಂದೂಡಿರುವ ಹೈಕೋರ್ಟ್, ಅಲ್ಲಿಯವರೆಗೂ ಯಡಿಯೂರಪ್ಪನವರನ್ನ ಬಂಧಿಸದಂತೆ ಮತ್ತು ಎಸಿಬಿ ತನಿಖೆ ನಡೆಸದಂತೆ ಹೈಕೋರ್ಟ್ ಸೂಚನೆ ನೀಡಿದೆ. ಶಿವರಾಮ ಕಾರಂತ ಬಡಾವಣೆ ಡಿನೋಟಿಫಿಕೇಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸಿಬಿಯಲ್ಲಿ ಯಡಿಯೂರಪ್ಪ ವಿರುದ್ಧ 2 ಎಫ್ಐಆರ್ ದಾಖಲಾಗಿವೆ.
ಇತ್ತ, ಈಶ್ವರಪ್ಪ ಪಿಎ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪ ಪಿಎ ಸಂತೋಷ್ ನಿರೀಕ್ಷಣಾ ಜಾಮೀನು ರದ್ದು ಕೋರಿ ಪೊಲೀಸರು ಸಲ್ಲಿಸಿರುವ ಅರ್ಜಿ ವಿಚಾರಣೆ ಸಹ ಮುಂದಕ್ಕೆ ಹೋಗಿದೆ. ಸೆಪ್ಟೆಂಬರ್ 3ಕ್ಕೆ ವಿಚಾರಣೆ ಮುಂದೂಡಿಕೆ ಮಾಡಿ ಸಿವಿಲ್ ಕೋರ್ಟ್ ಆದೇಶಿಸಿದೆ. ಸಂತೋಷ್ ಸಹಚರರು ನೋಡಿರುವ ಹೇಳಿಕೆ ಆಧರಿಸಿ ನಿರೀಕ್ಷಣಾ ಜಾಮಿನು ವಜಾಕ್ಕೆ ಪೊಲೀಸರು ಮನವಿ ಮಾಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ