Publish Date: Thu, 07 Dec 2017 (11:26 IST)
Updated Date: Thu, 07 Dec 2017 (11:31 IST)
ಬೆಂಗಳೂರು: ಮೈಸೂರು ರಾಜ ವಂಶಸ್ಥರ ಕುಟುಂಬಕ್ಕೆ ಹೊಸ ಯುವರಾಜನ ಆಗಮನವಾಗಿದೆ. ತಂದೆಯಾದ ಖುಷಿಯಲ್ಲಿರುವ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ಯದುವೀರ್ ಪತ್ನಿ ತ್ರಿಷಿಕಾ ಕುಮಾರಿ ನಿನ್ನೆ ರಾತ್ರಿ ಗಂಡು ಮಗುವಿಗೆ ಜನ್ಮ ನೀಡಿದ್ದರು. ಈ ಹಿನ್ನಲೆಯಲ್ಲಿ ಮೈಸೂರು ಅರಮನೆ ಸುತ್ತ ಅಭಿಮಾನಿಗಳು ಸಂಭ್ರಮಾಚರಿಸುತ್ತಿದ್ದಾರೆ.
ಇದರ ನಡುವೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ರಾಜ ಯದುವೀರ್, ‘ನನಗೆ ತುಂಬಾ ಖುಷಿಯಾಗುತ್ತಿದೆ. ರಾಜ್ಯದೆಲ್ಲೆಡೆಯಿಂದ ಶುಭಾಷಯ ಹರಿದುಬರುತ್ತಿದೆ. ಮನೆಯಲ್ಲಿ ಎಲ್ಲರಿಗೂ ಖುಷಿಯಾಗಿದೆ. ಶುಭಾಷಯ ಹೇಳಿದ ಎಲ್ಲರಿಗೂ ಧನ್ಯವಾದ’ ಎಂದಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ