ಬೆಂಗಳೂರು: ಮೈಸೂರು ಅಭಿವೃದ್ಧಿ ವಿಚಾರದಲ್ಲಿ ನಮ್ಮ ತಂದೆ ನಾಲ್ವಡಿ ಕೃಷ್ಣರಾಜ ಒಡೆಯರ್ ಗಿಂತ ಶ್ರೇಷ್ಠ ಎಂದಿದ್ದ ಸಿದ್ದರಾಮಯ್ಯ ಪುತ್ರ ಡಾ ಯತೀಂದ್ರಗೆ ಮೈಸೂರು ರಾಜವಂಶಸ್ಥ, ಬಿಜೆಪಿ ಸಂಸದ ಯದುವೀರ್ ಒಡೆಯರ್ ತಕ್ಕ ಪ್ರತಿಕ್ರಿಯೆ ನೀಡಿದ್ದಾರೆ.
ಯತೀಂದ್ರ ಹೇಳಿಕೆ ಈಗ ಭಾರೀ ಟೀಕೆಗೆ ಗುರಿಯಾಗುತ್ತಿದೆ. ನಾಲ್ವಡಿ ಕೃಷ್ಣರಾಜ ಒಡೆಯರ್ ಎಂದರೆ ರಾಜರ್ಷಿ, ನಾಡದೊರೆ ಎಂದೇ ಹೆಸರುವಾಸಿಯಾಗಿದ್ದವರು. ನಾಡ ಕಟ್ಟಿದ ದೊರೆಗೆ ಸಿದ್ದರಾಮಯ್ಯನವರನ್ನು ಹೋಲಿಕೆ ಮಾಡಿದ್ದಕ್ಕೆ ಯತೀಂದ್ರ ವಿರುದ್ಧ ಭಾರೀ ಟೀಕೆ ವ್ಯಕ್ತವಾಗಿದೆ.
ಯಾರು ಯಾರಿಗೂ ಹೋಲಿಕೆ ಮಾಡುವುದು ಸರಿಯಲ್ಲ. ಮಹಾರಾಜರು ಅವರ ಕೆಲಸ ಮಾಡಿದ್ದಾರೆ. ಮಹಾರಾಜರು ಮಾಡಿದ ಕೆಲಸ ಜನರ ಮುಂದೆ ಇದೆ. ನಾನು ಅದೇ ರಾಜವಂಶಸ್ಥನಾಗಿ ಈ ಬಗ್ಗೆ ಮಾತನಾಡಿದರೆ ಚೆನ್ನಾಗಿರಲ್ಲ. ವಿಷಯಗಳನ್ನು ಡೈವರ್ಟ್ ಮಾಡಲು ಏನೇನೋ ಮಾತನಾಡಬಾರದು. ಬೆಲೆ ಏರಿಕೆಯಿಂದ ಜನ ತತ್ತರಿಸಿದ್ದಾರೆ. ಟ್ಯಾಕ್ಸ್ ಹೆಸರಿನಲ್ಲಿ ಬಡ ವ್ಯಾಪಾರಿಗಳಿಗೆ ಹಿಂಸೆ ಕೊಡಲಾಗುತ್ತದೆ. ಮೊದಲು ಇವುಗಳನ್ನು ನಿಲ್ಲಿಸಿ. ನೀವು ನೀವೇ ಹೋಲಿಕೆ ಮಾಡೋದು ಬೇಡ ಎಂದು ತಿರುಗೇಟು ನೀಡಿದ್ದಾರೆ.