Publish Date: Thu, 22 Jun 2017 (12:42 IST)
Updated Date: Thu, 22 Jun 2017 (12:47 IST)
ತ್ರಿಷಿಕಾ ಕುಮಾರಿ ತಾಯಿಯಾಗುತ್ತಿರುವ ಬಗ್ಗೆ ವಿದ್ಯಾರ್ಥಿಗಳು ಕೇಳಿದ ಪ್ರಶ್ನೆಗಳಿಗೆ ಯದುವೀರದತ್ತ ಕೃಷ್ಣದತ್ತ ಚಾಮರಾಜ ಒಡೆಯರ್ ನಾಚಿ ನೀರಾದ ಘಟನೆ ನಡೆದಿದೆ.
ವಿದ್ಯಾರ್ಥಿಗಳೊಂದಿಗೆ ನಡೆದ ಸಭೆಯಲ್ಲಿ ಪತ್ನಿ ತ್ರಿಷಿಕಾ ಕುಮಾರಿ ತಾಯಿಯಾಗುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗಳಿಗೆ ನಾಚಿ ನೀರಾಗಿ ಇದು ವೈಯಕ್ತಿಕ ವಿಚಾರ. ಆದರೆ, ತಂದೆಯಾಗುತ್ತಿರುವುದಕ್ಕೆ ಸಂತಸವಾಗಿದೆ ಎಂದರು.
ವೈಯಕ್ತಿಕ ವಿಚಾರಗಳನ್ನು ಕೇಳಲು ಯಾರಿಗೂ ಅಧಿಕಾರ ಕೊಟ್ಟಿಲ್ಲ. ಆದ್ದರಿಂದ, ದಯವಿಟ್ಟು ವೈಯಕ್ತಿಕ ವಿಚಾರಗಳನ್ನು ಪ್ರಸ್ತಾಪಿಸಬೇಡಿ ಎಂದು ಮನವಿ ಮಾಡಿದರು.
ಪ್ರಮೋದಾದೇವಿ ಒಡೆಯರ್ ಅವರ ದತ್ತುಪುತ್ರನಾಗಿರುವ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಪತ್ನಿ ತ್ರಿಷಿಕಾ ಕುಮಾರಿ ತಾಯಿಯಾಗುತ್ತಿರುವುದು ರಾಜಕುಟುಂಬದಲ್ಲಿ ಸಂತಸ ಮನೆ ಮಾಡಿದೆ.
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
http://kannada.fantasycricket.webdunia.com/
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.