Select Your Language

Notifications

webdunia
webdunia
webdunia
webdunia

ದಸರಾ ಉದ್ಘಾಟನೆ ಮುನ್ನಾ ಬಾನು ಮುಪ್ತಾಕ್‌ರಿಂದ ಸ್ಪಷ್ಟನೆ ಕೇಳಿದ ಯದುವೀರ್ ಒಡೆಯರ್‌

ಮೈಸೂರು ದಸರಾ 2025

Sampriya

ಬೆಂಗಳೂರು , ಮಂಗಳವಾರ, 26 ಆಗಸ್ಟ್ 2025 (16:31 IST)
ಬೆಂಗಳೂರು:  ದಸರಾ ಆಚರಣೆಯ ಮುಖ್ಯ ಅತಿಥಿಯಾಗಿ ಉದ್ಘಾಟಿಸುವ ಮೊದಲು ಶ್ರೀಮತಿ ಬಾನು ಮುಪ್ತಾಕ್‌ ಅವರು ತಾಯಿ ಭುವನೇಶ್ವರಿ ಮತ್ತು ತಾಯಿ ಚಾಮುಂಡೇಶ್ವರಿ ಬಗ್ಗೆ ಗೌರವನ್ನು ಸ್ಪಷ್ಟಪಡಿಸುವು ಈ ಸಮಯದಲ್ಲಿ ಅತ್ಯಂತ ಅಗತ್ಯ ಎಂದು ಬಿಜೆಪಿ ಸಂಸದ ಯದುವೀರ್‌ ಕೃಷ್ಣದತ್ತ ಒಡೆಯರ್ ಹೇಳಿದರು. 

ಚಾಮುಂಡಿ ಬೆಟ್ಟದ ದೇವಸ್ಥಾನದಲ್ಲಿ ಸಾಂಪ್ರದಾಯಿಕವಾಗಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಪ್ರಾರಂಭವಾಗುವ ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವವನ್ನು ಮುಸ್ಲಿಂರೊಬ್ಬರು ಉದ್ಘಾಟಿಸಿವುದಕ್ಕೆ ಬಿಜೆಪಿ ಕೆಲ ನಾಯಕರು  ವಿರೋಧ ವ್ಯಕ್ತಪಡಿಸಿದ್ದಾರೆ. ಮೈಸೂರು ರಾಜವಂಶಸ್ಥ ಯದುವೀರ್‌ ಒಡೆಯರ್‌ ಅವರು ಉದ್ಘಾಟನೆ ವಿಚಾರದಲ್ಲಿ ರಾಜ್ಯ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ್ದರು. ಇದು ಬಿಜೆಪಿಯವರ ಮುಖಭಂಗಕ್ಕೂ ಕಾರಣವಾಗಿತ್ತು. ಇದೀಗ ಯದುವೀರ್‌ ಒಡೆಯರ್‌ ಯೂಟರ್ನ್‌ ಹೊಡೆದಿದ್ದು,‌ ದಸರಾ ಉದ್ಘಾಟನೆಗೂ ಮುನ್ನ ಬಾನು ಮುಷ್ತಾಕ್‌ ಅವರು ಈ ಸ್ಪಷ್ಟನೆ ನೀಡಬೇಕು ಎಂದಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡು, ಬಾನು ಮುಪ್ತಾಕ್ ಅವರಲ್ಲಿ ಸ್ಪಷ್ಟನೆಯನ್ನು ಕೇಳಿದ್ದಾರೆ.

ಈ ವಿಚಾರವಾಗಿ ಶ್ರೀಮತಿ ಭಾನು ಮುಷ್ತಾಕ್ ಅವರು ಕನ್ನಡ ಸಾಹಿತ್ಯ ಲೋಕದ ವಿಶಿಷ್ಟ ಬರಹಗಾರ್ತಿ ಮತ್ತು ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿಯನ್ನು ಗೆದ್ದ ಮೊದಲ ಕನ್ನಡ ಲೇಖಕಿಯಾಗಿ, ಕನ್ನಡ ಸಾಹಿತ್ಯ ಲೋಕಕ್ಕೆ ಅಪಾರ ಹೆಮ್ಮೆಯನ್ನು ತಂದಿದ್ದಾರೆ ನಿಜ ಆದರೆ ಈ ಹಿಂದೆ ಕನ್ನಡ ತಾಯಿ ಭುವನೇಶ್ವರಿಯ ಬಗ್ಗೆ ಅವರು  ಕೆಲವು ಹೇಳಿಕೆಗಳನ್ನು ನೀಡಿರುವುದು ನಮ್ಮ ಗಮನಕ್ಕೆ ಬಂದಿದೆ.

ದಸರಾ ಕೇವಲ ಸಾಂಸ್ಕೃತಿಕ ಕಾರ್ಯಕ್ರಮವಲ್ಲ, ಬದಲಾಗಿ ಶಾಸ್ತ್ರ ಮತ್ತು ಪುರಾಣಗಳಲ್ಲಿ ಉಲ್ಲೇಖಗೊಂಡಿರುವ ಮತ್ತು ವಿಜಯನಗರ ಸಾಮ್ರಾಜ್ಯ ಮತ್ತು ಮೈಸೂರು ಸಂಸ್ಥಾನದ ಕಾಲದಿಂದಲೂ ವೈಭವದಿಂದ ಆಚರಿಸಲ್ಪಡುವ ಹಿಂದೂ ಧಾರ್ಮಿಕ ಉತ್ಸವವಾಗಿದೆ.

ಈ ಪವಿತ್ರ ಪರಂಪರೆಯನ್ನು ಗಮನಿಸಿದರೆ, ಈ ವರ್ಷದ ದಸರಾ ಆಚರಣೆಯ ಮುಖ್ಯ ಅತಿಥಿಯಾಗಿ ಉದ್ಘಾಟಿಸುವ  ಮೊದಲು ಅವರು ತಾಯಿ ಭುವನೇಶ್ವರಿ ಮತ್ತು ತಾಯಿ ಚಾಮುಂಡೇಶ್ವರಿಯ ಬಗ್ಗೆ ಅವರ ಗೌರವವನ್ನು ಶ್ರೀಮತಿ ಭಾನು ಮುಷ್ತಾಕ್ ಸ್ಪಷ್ಟಪಡಿಸುವುದು ಈ ಸಮಯದಲ್ಲಿ ಅತ್ಯಂತ ಅಗತ್ಯ.

Share this Story:

Follow Webdunia kannada

ಮುಂದಿನ ಸುದ್ದಿ

ನಾನು ಹುಟ್ಟು ಕಾಂಗ್ರೆಸ್ಸಿಗ, ನಾನು ಕಾಂಗ್ರೆಸ್ಸಿಗನಾಗಿಯೇ ಸಾಯುತ್ತೇನೆ: ಡಿಕೆ ಶಿವಕುಮಾರ್ ಹೀಗಂದಿದ್ಯಾಕೆ