Publish Date: Wed, 20 Jul 2016 (18:55 IST)
Updated Date: Wed, 20 Jul 2016 (18:57 IST)
ಯರಗಟ್ಟಿ ಶುಗರ್ಸ್‌ಗೆ ಕಬ್ಬಿನ ಕ್ಷೇತ್ರದ ನಿಗದಿ ಮಾಡುವ ಕುರಿತು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಗ್ರೀನ್ ಸಿಗ್ನಲ್ ನೀಡಲಾಗಿದೆ ಎಂದು ಕಾನೂನು ಸಚಿವ ಟಿ.ಬಿ.ಜಯಚಂದ್ರ ಸ್ಪಷ್ಟಪಡಿಸಿದ್ದಾರೆ.
ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಸಚಿವ ಟಿ.ಬಿ.ಜಯಚಂದ್ರ, ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಕಾರ್ಖಾನೆಗೆ 13 ಗ್ರಾಮಗಳ ಕಬ್ಬಿನ ಕ್ಷೇತ್ರದ ನಿಗದಿಗೆ ಸಚಿವ ಸಂಪುಟ ತೀರ್ಮಾನಿಸಿದೆ ಎಂದು ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಸನ್ನಡತೆ ಆಧಾರದ ಮೇಲೆ ಜೀವಾವಧಿ ಶಿಕ್ಷೆಗೆ ಒಳಗಾದ ಕೈದಿಗಳಿಗೆ ಗೈಡ್‌ಲೈನ್ ರೂಪಿಸುವ ತೀರ್ಮಾನ, ಅಕ್ರಮ-ಸಕ್ರಮ ದಂಡ ಪ್ರಮಾಣ ಕಡಿಮೆ ಮಾಡುವ ಕುರಿತ ಚರ್ಚೆ ಸೇರಿದಂತೆ ಹಲವು ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಲಾಗಿದೆ ಸಚಿವ ಟಿ.ಬಿ.ಜಯಚಂದ್ರ ಹೇಳಿದ್ದಾರೆ.