Publish Date: Thu, 16 Oct 2025 (15:21 IST)
Updated Date: Thu, 16 Oct 2025 (15:23 IST)
ಮೈಸೂರು: 5 ವರ್ಷ ಸಿಎಂ ಆಗಿ ಸಿದ್ದರಾಮಯ್ಯ ಅವರೇ ಇದ್ರೆ ರಾಜ್ಯಕ್ಕೆ ಒಳ್ಳೆದಾಗುತ್ತೆ ಎಂದು ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದರು.
ಅವರು ನವೆಂಬರ್ ಕ್ರಾಂತಿ ವಿಚಾರದ ಬಗ್ಗೆ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿ, ಈ ವಿಚಾರದ ಬಗ್ಗೆ ನನಗೆ ಹೆಚ್ಚು ಗೊತ್ತಿಲ್ಲ. ತಂದೆಯವರು ಕೊಟ್ಟಿರುವ ಮಾಹಿತಿಯ ಪ್ರಕಾರ ಹೈಕಮಾಂಡ್ ಆಗಲಿ ಬೇರೆ ನಾಯಕರಾಗಲಿ ಯಾರು ಕೂಡ ನವೆಂಬರ್ ಆದ ಮೇಲೆ ಅಧಿಕಾರ ಬಿಡಿ ಎಂದು ಹೇಳಿಲ್ಲ ಎಂದಿದ್ದಾರೆ.
ಇವರೆಲ್ಲ ಯಾವ ಕ್ರಾಂತಿ ಬಗ್ಗೆ ಮಾತನಾಡುತ್ತಿದ್ದಾರೆ ನನಗೆ ಗೊತ್ತಿಲ್ಲ. ರಾಜಕೀಯ ಬದುಕಿನಲ್ಲಿ ಏನ್ ಬೇಕಾದ್ರೂ ನಡೆಯಬಹುದು. ಈಗಿನ ಪರಿಸ್ಥಿತಿ ನೋಡಿದ್ರೆ ನಮ್ಮ ತಂದೆ 5 ವರ್ಷ ಸಿಎಂ ಆಗಿ ಇರುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇನ್ನೂ ಸಿಎಂ ಸಿದ್ದರಾಮಯ್ಯ ಅವರಿಗೆ ಶಾಸಕರ ಬೆಂಬಲ ಇದೆ. ಇಲ್ಲ ಅಂದಿದ್ರೆ ಶಾಸಕರು ಸುಮ್ಮನೆ ಇರ್ತಿದ್ರಾ. ಹೈಕಮಾಂಡ್ ಹೋಗಿ ದೂರು ಕೊಡುತ್ತಿದ್ದರು ಎಂದು ಹೇಳಿದ್ದಾರೆ.