ಬೆಳಗಾವಿ: ಡಿಸಿಎಂ ಡಿಕೆ ಶಿವಕುಮಾರ್ ನಿನ್ನೆ ತಮ್ಮ ಆಪ್ತ ಶಾಸಕರೊಂದಿಗೆ ನಡೆಸಿದ ಡಿನ್ನರ್ ಮೀಟಿಂಗ್ ಬಗ್ಗೆ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಶಾಕಿಂಗ್ ಪ್ರತಿಕ್ರಿಯೆ ನೀಡಿದ್ದಾರೆ.
ಮೊನ್ನೆಯಷ್ಟೇ ಬೆಳಗಾವಿಯಲ್ಲಿ ಸಿದ್ದರಾಮಯ್ಯ ಆಪ್ತ ಬಳಗ ಡಿನ್ನರ್ ಮೀಟಿಂಗ್ ನಡೆಸಿತ್ತು. ಅದಕ್ಕೆ ಪ್ರತಿಯಾಗಿ ಎಂಬಂತೆ ನಿನ್ನೆ ರಾತ್ರಿ ಡಿಕೆ ಶಿವಕುಮಾರ್ ಆಪ್ತ ಬಳಗ ಡಿನ್ನರ್ ಮೀಟಿಂಗ್ ನಡೆಸಿರುವುದು ಕುರ್ಚಿ ಕದನದ ಬಗ್ಗೆ ಕುತೂಹಲ ಹೆಚ್ಚಾಗಿಸಿದೆ.
ಇದರ ಬಗ್ಗೆ ಇಂದು ಮಾಧ್ಯಮಗಳು ಸಿಎಂ ಸಿದ್ದರಾಮಯ್ಯ ಪುತ್ರ, ಎಂಎಲ್ ಸಿ ಯತೀಂದ್ರ ಪ್ರತಿಕ್ರಿಯೆ ಕೇಳಿವೆ. ಈ ವೇಳೆ ಪ್ರತಿಕ್ರಿಯಿಸಿದ ಅವರು ಅದರ ಬಗ್ಗೆ ನಾನು ಯಾಕೆ ಏನಾದ್ರೂ ಹೇಳಬೇಕು? ನಾನೇನೂ ಹೇಳಲ್ಲ. ಎಲ್ಲರೂ ಅವರವರ ಆಪ್ತರೊಂದಿಗೆ ಮೀಟಿಂಗ್ ನಡೆಸುತ್ತಿದ್ದಾರೆ ಎಂದಿದ್ದಾರೆ.
ಬೇರೆಯವರು ನೀಡಿದ ಹೇಳಿಕೆಗಳಿಗೆಲ್ಲಾ ನಾನು ಪ್ರತಿಕ್ರಿಯಿಸಲ್ಲ. ನಾನು ಏನು ಹೇಳಬೇಕೋ ಅದನ್ನು ಹೇಳಿದ್ದೇನೆ ಎಂದು ಜಾರಿಕೊಂಡಿದ್ದಾರೆ. ಹೈಕಮಾಂಡ್ ನಾಯಕರನ್ನು ಸಿಎಂ, ಡಿಸಿಎಂ ಭೇಟಿ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿಲು ನಿರಾಕರಿಸಿದ್ದಾರೆ.