Publish Date: Mon, 27 Jul 2026 (18:00 IST)
Updated Date: Mon, 27 Jul 2026 (18:04 IST)
ಮೈಸೂರು: ದಸರಾ ಉದ್ಘಾಟಕರ ಹೆಸರನ್ನು ಸಿಎಂ ಡಿಕೆ ಶಿವಕುಮಾರ್ ಅವರೇ ಆಯ್ಕೆ ಮಾಡಲಿದ್ದು, ಅವರ ನಿರ್ಧಾರವೇ ಅಂತಿಮ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಹೇಳಿದರು.
ದಸರಾ ಸಿದ್ಧತಾ ಸಭೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದಸರಾ ಉದ್ಘಾಟನಾ ವಿಚಾರದಲ್ಲಿ ಸಿಎಂ ಡಿಕೆ ಶಿವಕುಮಾರ್ ಅವರ ನಿರ್ಧಾರ ಅಂತಿಮವಾಗಲಿದ್ದು, ಉದ್ಘಾಟಕರ ಆಯ್ಕೆಯನ್ನು ಅವರಿಗೆನೆ ಬಿಟ್ಟಿದ್ದೇವೆ. ಅವರಿಗೆ ಶಾಸಕರು ಒಂದಷ್ಟು ಸಲಹೆಯನ್ನು ನೀಡಿದ್ದೇವೆ. ಇನ್ನೂ ಈ ಬಾರಿ ದಸರಾದಲ್ಲಿ 17 ಉಪಸಮಿತಿಗಳನ್ನು ರಚನೆ ಮಾಡಲು ನಿರ್ಧಾರ ಮಾಡಿದ್ದೇವೆ ಎಂದಿದ್ದಾರೆ. ಆದರೆ ಸಾಮಾಜಿಕ ಜಾಲತಾಣದಲ್ಲಿ ಅನಿಲ್ ಕುಂಬ್ಳೆ, ರಾಹುಲ್ ದ್ರಾವಿಡ್ ಹೆಸರು ಮುಂಚೂಣಿಯಲ್ಲಿದೆ.
ಇನ್ನೂ ವಿವಾದಕ್ಕೆ ಕಾರಣವಾದ ಮೈಸೂರು ದಸರಾದಲ್ಲಿ ಕಂಬಳ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕಂಬಳ ಬಗ್ಗೆ ಇನ್ನೂ ತೀರ್ಮಾನ ಆಗಿಲ್ಲ. ಕಂಬಳ ಫೈನಲ್ ಆದರೆ ಇನ್ನೊಂದು ಉಪಸಮಿತಿ ಆಗುತ್ತದೆ. ಇನ್ನೂ ಒಂದು ವೇಳೆ ದಸರಾದಲ್ಲಿ ಕಂಬಳ ನಡೆದರೆ ಸಾತಗಳ್ಳಿಯಲ್ಲಿ ನಡೆಯುತ್ತದೆ. ಆದರೆ ಈ ಬಗ್ಗೆ ಮುಖ್ಯಮಂತ್ರಿಗಳು ಇನ್ನೂ ಅಂತಿಮ ತೀರ್ಮಾನವನ್ನು ಕೈಗೊಂಡಿಲ್ಲ ಎಂದು ಹೇಳಿದರು.
About Writer
ಸಂಪ್ರಿಯ
ಕನ್ನಡ ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷದಲ್ಲಿ ಬೇರೆ ಬೇರೆ ಸಂಸ್ಥೆಗಳಲ್ಲಿ ರಿಪೋರ್ಟರ್ ಆಗಿ, ಸಬ್ ಎಡಿಟರ್ ಆಗಿ, ಇದೀಗ ಕಂಟೆಂಟ್ ರೈಟರ್ ಆಗಿ ವೆಬ್ದುನಿಯಾದಲ್ಲಿ ಕೆಲಸ. ಆಳ್ವಾಸ್ ಕಾಲೇಜಿನಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋಧ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು 2016ನೇ ಸಾಲಿನಲ್ಲಿ ಪಡೆದಿರುತ್ತೇನೆ. ಮನರಂಜನೆ, ಲೈಫ್ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ವಿಶೇಷ ಆಸಕ್ತಿ. ....
ಮತ್ತಷ್ಟು ಓದಿ