ಭಾರತ ಹಿಂದೂ ರಾಷ್ಟ್ರವಾಗಲು ಬಿಡಲ್ಲ, ಆದರೆ ಪಾಕಿಸ್ತಾನದಂತಾಗುತ್ತದೆ: ಯತೀಂದ್ರ ಸಿದ್ದರಾಮಯ್ಯ

Webdunia
ಗುರುವಾರ, 4 ಜನವರಿ 2024 (11:33 IST)
Photo Courtesy: Twitter
ಮೈಸೂರು: ಭಾರತವನ್ನು ಹಿಂದೂ ರಾಷ್ಟ್ರವಾಗಲು ಬಿಡಲ್ಲ. ಒಂದು ವೇಳೆ ಹಿಂದೂ ರಾಷ್ಟ್ರವಾದರೆ ನಮ್ಮ ದೇಶ ಪಾಕಿಸ್ತಾನ, ಅಫ್ಘಾನಿಸ್ತಾದಂತಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಪುತ್ರ, ಶಾಸಕ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಮಾತನಾಡುವ ವೇಳೆ ಅವರು ಈ ರೀತಿ ಹೇಳಿದ್ದಾರೆ. ಇದೀಗ ಬಿಜೆಪಿ ಮತ್ತು ಬೆಂಬಲಿಗರ ಟೀಕೆಗೆ ಗುರಿಯಾಗಿದೆ.  ಈ ಮೊದಲು ಸಿಎಂ ಸಿದ್ದರಾಮಯ್ಯ ಕೂಡಾ ಇದೇ ಹೇಳಿಕೆ ನೀಡಿದ್ದರು. ಇದೀಗ ಪುತ್ರನ ಸರದಿ.

‘ಅಂಬೇಡ್ಕರ್ ಕೂಡಾ ಭಾರತ ಹಿಂದೂ ರಾಷ್ಟ್ರವಾಗಲು ಬಿಡಬಾರದು ಎಂದಿದ್ದರು. ನಾವು ಭಾರತವನ್ನು ಹಿಂದೂ ರಾಷ್ಟ್ರವಾಗಲು ಬಿಡಲ್ಲ. ಹಾಗೊಂದು ವೇಳೆ ಇದು ಹಿಂದೂ ರಾಷ್ಟ್ರವಾದರೆ ಈ ದೇಶ ಪಾಕಿಸ್ತಾನ, ಅಫ್ಘಾನಿಸ್ತಾನದಂತಾಗುತ್ತದೆ. ಆದರೆ ಬಿಜೆಪಿ ಮತ್ತು ಆರ್ ಎಸ್ಎಸ್ ಭಾರತವನ್ನು ಹಿಂದೂ ರಾಷ್ಟ್ರವಾಗಿ ಮಾಡಲು ಪ್ರಯತ್ನಿಸುತ್ತಿದೆ’ ಎಂದಿದ್ದರು.

ಯತೀಂದ್ರ ಹೇಳಿಕೆ ಪೇಜಾವರ ಶ್ರೀಗಳು ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ. ‘ಭಾರತವನ್ನು ಹಿಂದೂ ರಾಷ್ಟ್ರ ಮಾಡಿದರೆ ಪಾಕಿಸ್ತಾನ ಮಾಡಲು ಯಾರೋ ಸಿದ್ಧತೆ ನಡೆಸುತ್ತಿದ್ದಾರೇನೋ. ಅಂತಹ ಸಿದ್ಧತೆ ಇಲ್ಲಿ ನಡೆಯುತ್ತಿದೆ ಎಂಬುದರ ಮುನ್ಸೂಚನೆ ಕೊಡುತ್ತಿದ್ದಾರೆ. ಅವರ ಹೇಳಿಕೆ ಸರಿಯಲ್ಲ. ಭಾರತ ಹಿಂದಿನಿಂದಲೂ ಹಿಂದೂ ರಾಷ್ಟ್ರವಾಗಿದ್ದು ಜಾತಿ, ಪಂಗಡ ಎಂದು ಮೀಸಲಿರದೆ ಎಲ್ಲರನ್ನು ಅಪ್ಪಿಕೊಂಡ ದೇಶ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯಗೆ ಬಂತು ಸುಪ್ರೀಂ ನೋಟಿಸ್, ಯಾವಾ ಪ್ರಕರಣದಲ್ಲಿ ಗೊತ್ತಾ

ಮುಸ್ಲಿಮರನ್ನು ಖುಷಿಪಡಿಸಲು ಕಾಂಗ್ರೆಸ್ ವಂದೇಮಾತರಂನ್ನು ತುಂಡು ಮಾಡಿತು: ಪ್ರಧಾನಿ ಮೋದಿ

ಡಿಕೆ ಶಿವಕುಮಾರ್ ಸಿಎಂ ಆಗುವ ಬಗ್ಗೆ ಸಿದ್ದರಾಮಯ್ಯ ಪುತ್ರ ಯತೀಂದ್ರ ಸ್ಪೋಟಕ ಹೇಳಿಕೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments