Publish Date: Thu, 04 May 2023 (18:00 IST)
Updated Date: Thu, 04 May 2023 (17:34 IST)
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನಾಲಾಯಕ್ ಪದ ಬಳಕೆ ಹಿನ್ನೆಲೆ ಶಾಸಕ ಪ್ರಿಯಾಂಕ್ ಖರ್ಗೆಗೆ ಚುನಾವಣಾ ಆಯೋಗದಿಂದ ನೋಟಿಸ್ ಜಾರಿಯಾಗಿದೆ. ಮಾದರಿ ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆ ನೋಟಿಸ್ ನೀಡಿದ್ದು ಇಂದು ಸಂಜೆ 5ರೊಳಗೆ ನೋಟಿಸ್‌ಗೆ ಉತ್ತರಿಸುವಂತೆ ಸೂಚಿಸಲಾಗಿದೆ. ಇನ್ನು ಮತ್ತೊಂದೆಡೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ವಿರುದ್ಧ ವಿಷಕನ್ಯೆ ಪದ ಬಳಕೆ ಹಿನ್ನೆಲೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ಗೆ ಚುನಾವಣಾ ಆಯೋಗದಿಂದ ನೋಟಿಸ್ ಜಾರಿಯಾಗಿದ್ದು, ಇಂದು ಸಂಜೆ 5ರೊಳಗೆ ನೋಟಿಸ್‌ಗೆ ಉತ್ತರಿಸಲು ಸೂಚಿಸಲಾಗಿದೆ.