Publish Date: Sat, 29 Apr 2023 (15:00 IST)
Updated Date: Sat, 29 Apr 2023 (14:54 IST)
ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರನ್ನು ವಿಷಕನ್ಯೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕರೆದಿರುವುದನ್ನು ಪಕ್ಷ ಒಪ್ಪಲ್ಲ. ಆದರೆ, ಅವರ ಹೇಳಿಕೆಗೂ ಪಕ್ಷಕ್ಕೂ ಸಂಬಂಧವಿಲ್ಲ. ಹಾಗಾಗಿ ಮೋದಿ ಕ್ಷಮೆ ಯಾಚಿಸುವ ಪ್ರಶ್ನೆಯೇ ಇಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ ಅಶ್ವತ್ಥ್ ನಾರಾಯಣ್ ಸ್ಪಷ್ಟಪಡಿಸಿದ್ದಾರೆ....ಮಲ್ಲೇಶ್ವರದಲ್ಲಿರುವ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಧಾನಿ ಮೋದಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ನೀಡಿದ್ದ ಹೇಳಿಕೆಗೆ ಪ್ರತಿಯಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸೋನಿಯಾ ಗಾಂಧಿ ಅವರಿಗೆ ವಿಷಕನ್ಯೆ ಎಂದು ಸಂಬೋಧಿಸಿದ್ದಾರೆ. ಯತ್ನಾಳ್ ಬದಲು ಪ್ರಧಾನಿ ಕ್ಷಮೆ ಕೇಳಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಆಗ್ರಹಿಸಿದ್ದಾರೆ. ಆದರೆ, ಇದು ಯತ್ನಾಳ್ ಅವರ ವೈಯಕ್ತಿಕ ಹೇಳಿಕೆಯಾಗಿದೆ. ಇದು ಪಕ್ಷದ ಹೇಳಿಕೆಯಲ್ಲ. ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷರು ಹೇಳಿಕೆ ನೀಡಿದ್ದಾರೆ. ಹಾಗಾಗಿ ಅದು ಕಾಂಗ್ರೆಸ್ ಪಕ್ಷದ ಹೇಳಿಕೆಯಾಗಲಿದೆ. ಆದರೆ, ಯತ್ನಾಳ್ ಹೇಳಿಕೆ ಪಕ್ಷದ ಹೇಳಿಕೆಯಾಗಲ್ಲ. ಹಾಗಾಗಿ ಪ್ರಧಾನಿ ಮೋದಿ ಕ್ಷಮೆ ಕೇಳುವ ಪ್ರಶ್ನೆಯೇ ಉದ್ಭವವಾಗಲ್ಲ ಎಂದ್ರು