ಬಸವಣ್ಣನ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಯತ್ನಾಳ್‌ರನ್ನು ಹುಚ್ಚಾಸ್ಪತ್ರೆಗೆ ಸೇರಿಸಬೇಕು: ಡಿಕೆಶಿ

Sampriya
ಭಾನುವಾರ, 1 ಡಿಸೆಂಬರ್ 2024 (17:05 IST)
ಬೆಂಗಳೂರು: ಬಸವಣ್ಣನವರಿಗೆ ಯತ್ನಾಳ್ ಒಬ್ಬರೇ ಮಸಿ ಬಳಿದಿಲ್ಲ. ಇಡೀ ಬಿಜೆಪಿ ಪಕ್ಷವೇ ಮಸಿ ಬಳಿಯುತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಅವರು ಆಕ್ರೋಶ ಹೊರಹಾಕಿದರು.

ಬೆಂಗಳೂರು ನಗರದ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಸವಣ್ಣನವರ ಬಗ್ಗೆ ಹುಚ್ಚರಂತೆ ಮಾತನಾಡಿರುವ ಯತ್ನಾಳ್ ಅವರನ್ನು ಹುಚ್ಚಾಸ್ಪತ್ರೆಗೆ ಸೇರಿಸಬೇಕು ಎಂದು ಅನೇಕ ಮಠಾಧೀಶರು ಕೂಡ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದರು.

ಬಸವಣ್ಣನವರ ಚಿಂತನೆಯೇ ಕಾಂಗ್ರೆಸ್ ಪಕ್ಷದ ಚಿಂತನೆ. ಸಿದ್ದರಾಮಯ್ಯ ಅವರು ಮೊದಲ ಬಾರಿ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದೇ ಬಸವಣ್ಣ ಜಯಂತಿಯಂದು. ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನವರ ಭಾವಚಿತ್ರ ಕಡ್ಡಾಯ ಮಾಡಿದ್ದು, ಬಸವಣ್ಣನವರ ಜಯಂತಿಗೆ ಶಕ್ತಿ ಕೊಟ್ಟಿದ್ದು, ಅವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿದ್ದು ನಮ್ಮ ಕಾಂಗ್ರೆಸ್ ಸರ್ಕಾರ. ಯಾವ ಜನತಾದಳ, ಬಿಜೆಪಿ, ಜನಸಂಘವೂ ಈ ಕೆಲಸ ಮಾಡಿಲ್ಲ ಎಂದು ಹೇಳಿದರು.

ಯತ್ನಾಳ್ ಅವರಂತಹ ಮುತ್ತು ರತ್ನವನ್ನು ಬಿಜೆಪಿಯವರು ತಮ್ಮ ಬಳಿಯೇ ಇಟ್ಟುಕೊಳ್ಳಲಿ. ಇದು ಆ ಪಕ್ಷದ ಆಂತರಿಕ ವಿಚಾರ. ಅದಕ್ಕೆ ನಾವು ತಲೆ ಹಾಕುವುದಿಲ್ಲ ಎಂದರು.




ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಲಸ ಮಾಡುವವರಿಗಿಂತ, ಚಾಡಿ ಹೇಳುವವರೆ ಕುಮಾರಸ್ವಾಮಿಗೆ ಪ್ರಿಯ: ಜಿಟಿ ದೇವೇಗೌಡ

ಹಿಂದೂ ವಿರೋಧಿ ಹೇಳಿಕೆ, ಇದೆಲ್ಲ ಅವರುಗಳ ಸೃಷ್ಟಿ: ಮಾಜಿ ಸಚಿವ ಆಂಜನೇಯ ಸ್ಪಷ್ಟನೆ

ದೆಹಲಿ ಸ್ಪೋಟ ಪ್ರಕರಣ: ರೈಲು, ವಿಮಾನ ಪ್ರಯಾಣಿಕರಿಗೆ ಸಲಹೆ ಕೊಟ್ಟ ದೆಹಲಿ ಪೊಲೀಸರು

Delhi Blast: ಪುಲ್ವಾಮಾ ದಾಳಿಯ ಮಾಸ್ಟರ್‌ಮೈಂಡ್‌ನ ಪತ್ನಿಯೊಂದಿಗೆ ಶಾಹೀನ ಲಿಂಕ್

ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆ ರೈತರ ಬದುಕನ್ನು ಕಷ್ಟವಾಗಿಸಿದೆ: ಪ್ರಹ್ಲಾದ್ ಜೋಶಿ

ಮುಂದಿನ ಸುದ್ದಿ
Show comments