Publish Date: Wed, 19 Feb 2020 (19:01 IST)
Updated Date: Wed, 19 Feb 2020 (19:03 IST)
ವಿಧಾನಸಭೆಯಲ್ಲಿ ರಾಜ್ಯಸರಕಾರದ ಕಾರ್ಯವೈಖರಿ ವಿರುದ್ಧ ಕಿಡಿಕಾರುತ್ತಿರುವ ಮಾಜಿ ಸಿಎಂ ಸಿದ್ದರಾಮಯ್ಯರ ಕ್ಷೇತ್ರಕ್ಕೆ ಭರ್ಜರಿ ಗಿಫ್ಟ್ ದೊರಕಿದೆ.
ಬಾದಾಮಿ ಮತಕ್ಷೇತ್ರದ ಅಭಿವೃದ್ಧಿಗಾಗಿ ಬಜೆಟ್ ನಲ್ಲಿ 600 ಕೋಟಿ ರೂ. ಗಳ ಯೋಜನೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅನುಮೋದನೆ ನೀಡಿದ್ದಾರೆ.
ಅಧಿವೇಶನದಲ್ಲಿ ಸರಕಾರದ ನಡೆಯನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿರುವ ಸಿದ್ದರಾಮಯ್ಯರನ್ನು ಸಮಾಧಾನಗೊಳಿಸಲು ಯಡಿಯೂರಪ್ಪ ಬಾದಾಮಿ ಕ್ಷೇತ್ರಕ್ಕೆ ಬಂಪರ್ ಕೊಡುಗೆ ನೀಡ್ತಿದ್ದಾರೆ ಎನ್ನಲಾಗ್ತಿದೆ.
ಬಾದಾಮಿ ಅಭಿವೃದ್ಧಿ ಮಾಡುವೆ ಅಂತ ಜನರಿಗೆ ಭರವಸೆ ನೀಡಿದ್ದ ಸಿದ್ದರಾಮಯ್ಯ ಅದನ್ನು ಉಳಿಸಿಕೊಂಡಿದ್ದಾರೆ.