Publish Date: Tue, 20 Mar 2018 (14:16 IST)
Updated Date: Tue, 20 Mar 2018 (14:19 IST)
ವಿಜಯಪುರ : ಪ್ರತ್ಯೇಕ ಲಿಂಗಾಯತ ಧರ್ಮ ಸ್ಥಾಪನೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಸಚಿವರಾದ ಅನಂತಕುಮಾರ್, ಸದಾನಂದಗೌಡ ಅವರು ಹಾಲಲ್ಲಿ ಉಪ್ಪು ಹಾಕುವ ಕೆಲಸವನ್ನು ಮಾಡದೆ ನಮಗೆ ಸಹಾಯ ಮಾಡಬೇಕೆಂದು ಜಲಸಂಪನ್ಮೂಲ ಸಚಿವ ಎಂ ಬಿ ಪಾಟೀಲ್ ಅವರು ಮನವಿ ಮಾಡಿದ್ದಾರೆ.
ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,’ ಪ್ರತ್ಯೇಕ ಲಿಂಗಾಯತ ಧರ್ಮ ಸ್ಥಾಪನೆ ಶಿಫಾರಸ್ಸು ಪತ್ರವನ್ನು ರಾಜ್ಯ ಸರ್ಕಾರ, ಕೇಂದ್ರಕ್ಕೆ ಕಳುಹಿಸಿದೆ. ಆದ್ರೆ ಆ ವಿಚಾರದಲ್ಲಿ ಹಾಲಲ್ಲಿ ಉಪ್ಪು ಹಾಕುವ ಕೆಲಸವನ್ನು ಮಾಡಬೇಡಿ. ಸಾಕಷ್ಟು ಪುರಾವೆಗಳನ್ನು, ಸಾಕ್ಷ್ಯಗಳನ್ನು ನೀಡಿ ಕೇಂದ್ರಕ್ಕೆ ಕಳುಹಿಸಿದ್ದೇವೆ. ಕೇಂದ್ರ ಸರ್ಕಾರ ಕೂಡ ನಮ್ಮ ಮನವಿಗೆ ಸ್ಪಂದಿಸುತ್ತದೆಯೆಂಬ ಅಚಲ ವಿಶ್ವಾಸವಿದೆ. ಆದ್ರೆ ಅದ್ರಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಸಚಿವರಾದ ಅನಂತಕುಮಾರ್, ಸದಾನಂದಗೌಡ ಅವರು ನಮಗೆ ಸಹಾಯ ಮಾಡಬೇಕೆಂದು ಅವರು ಮನವಿ ಮಾಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ