Select Your Language

Notifications

webdunia
webdunia
webdunia
webdunia

ಕೆ.ಎಸ್.ಈಶ್ವರಪ್ಪ ವಿರುದ್ಧ ಯಡಿಯೂರಪ್ಪ ಕೆಂಡಾಮಂಡಲ

ಕೆ.ಎಸ್.ಈಶ್ವರಪ್ಪ ವಿರುದ್ಧ ಯಡಿಯೂರಪ್ಪ ಕೆಂಡಾಮಂಡಲ
ಬೆಂಗಳೂರು , ಬುಧವಾರ, 29 ಜೂನ್ 2016 (13:11 IST)
ಪದಾಧಿಕಾರಿಗಳ ನೇಮಕದಲ್ಲಿ ತಾರತಮ್ಯವಾಗಿದ್ದರಿಂದ ಕಾರ್ಯಕರ್ತರಲ್ಲಿ ಅಸಮಾಧಾನವಾಗಿದೆ ಎಂದು ಹೇಳಿಕೆ ನೀಡಿರುವ ಕೆ.ಎಸ್.ಈಶ್ವರಪ್ಪ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕೆಂಡಾಮಂಡಲವಾಗಿದ್ದಾರೆ. 
 
ನಿನ್ನೆ ಹೋಟೆಲ್‌ನಲ್ಲಿ ನಡೆದ ಅತೃಪ್ತ ಮಾಜಿ ಶಾಸಕರ ಸಭೆಯಲ್ಲಿ ಪಾಲ್ಗೊಂಡಿದ್ದ ಈಶ್ವರಪ್ಪ, ಪದಾಧಿಕಾರಿಗಳ ನೇಮಕ ಕುರಿತಂತೆ ಪ್ರತಿಯೊಬ್ಬರ ಅಭಿಪ್ರಾಯಗಳನ್ನು ಸ್ವೀಕರಿಸಿ, ರಾಜ್ಯದ ಉಸ್ತುವಾರಿ ಹೊತ್ತಿರುವ ಮುರಳಿಧರ್ ಅವರಿಗೆ ರವಾನಿಸಿದ್ದರು.
 
ಕೆ.ಎಸ್.ಈಶ್ವರಪ್ಪ ರಾಜ್ಯದ ಉಸ್ತುವಾರಿ ಹೊತ್ತಿರುವ ಮುರಳಿಧರ್ ಅವರಿಗೆ ಪದಾಧಿಕಾರಿಗಳ ಬಗ್ಗೆ ಅಭಿಪ್ರಾಯಗಳನ್ನು ರವಾನಿಸಿರುವುದು ಪಕ್ಷದ ಸಂಘಟನಾ ಕಾರ್ಯದರ್ಶಿ ರವಿಕುಮಾರ್ ಅವರಿಂದ ತಿಳಿದುಕೊಂಡ ನಂತರ ಯಡಿಯೂರಪ್ಪ ಆಕ್ರೋಶಗೊಂಡಿದ್ದಾರೆ ಎನ್ನಲಾಗಿದೆ.
 
ಪದಾಧಿಕಾರಿಗಳ ನೇಮಕದಲ್ಲಿ ಯಾವುದೇ ತಾರತಮ್ಯವಾಗಿಲ್ಲ. ಬಿಜೆಪಿ ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ ಎಂದು ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
 
ಆದರೆ, ಸದಾನಂದಗೌಡ ಮತ್ತು ಈಶ್ವರಪ್ಪ ಮಾತ್ರ ಬಹಿರಂಗವಾಗಿ ಯಡಿಯೂರಪ್ಪ ಅವರ ನಡೆಯಿಂದ ಕಾರ್ಯಕರ್ತರು ಅಸಮಾಧಾನಗೊಂಡಿದ್ದಾರೆ ಎಂದು ಬಹಿರಂಗವಾಗಿ ಹೇಳಿಕೆ ನೀಡಿರುವುದು ಯಡಿಯೂರಪ್ಪಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.
 
ಆದಾಗ್ಯೂ, ಪದಾಧಿಕಾರಿಗಳ ನೇಮಕದ ಅಪಸ್ವರದ ನಡುವೆಯೂ ಜಿಲ್ಲಾ ಪ್ರಭಾರಿಗಳ ನೇಮಕ ಮಾಡಿ ಆದೇಶ ಹೊರಡಿಸಿದ ಯಡಿಯೂರಪ್ಪ, ತಮ್ಮ ಎದುರಾಳಿಗಳಿಗೆ ಪ್ರಬಲ ತಿರುಗೇಟು ನೀಡಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಯಡಿಯೂರಪ್ಪ ನಡೆಯಿಂದ ಬಿಜೆಪಿ ಕಾರ್ಯಕರ್ತರಿಗೆ ಅಸಮಾಧಾನ : ಕೆ.ಎಸ್. ಈಶ್ವರಪ್ಪ