ಗಾಣಗಾಪೂರ ಅಭಿವೃದ್ಧಿಗೆ 10 ಕೋಟಿ ಘೋಷಿಸಿದ ಯಡಿಯೂರಪ್ಪ

Webdunia
ಗುರುವಾರ, 17 ಅಕ್ಟೋಬರ್ 2019 (19:49 IST)
ದೇವಲ ಗಾಣಗಾಪೂರ ಅಭಿವೃದ್ಧಿಗೆ 10 ಕೋಟಿ ರೂಪಾಯಿ ಅನುದಾನವನ್ನು ಸಿಎಂ ಬಿ.ಎಸ್.ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.

ಕಲಬುರಗಿಯ ಅಫಜಲಪೂರ ತಾಲೂಕಿನ ದತ್ತನ ಸುಕ್ಷೇತ್ರವಾದ ದೇವಲ ಗಾಣಗಾಪೂರ ಸಮಗ್ರ ಅಭಿವೃದ್ಧಿಗೆ 10 ಕೋಟಿ ರೂ. ಅನುದಾನ ನೀಡುವುದಾಗಿ ಮುಖ್ಯಮಂತ್ರಿ ಘೋಷಣೆ ಮಾಡಿದ್ದಾರೆ. ಕೂಡಲೆ ಜಿಲ್ಲಾ ಉಸ್ತುವಾರಿ ಸಚಿವರು ಅನುದಾನ ಸದ್ಬಳಕೆಗೆ ಕಾರ್ಯಪ್ರವೃತ್ತರಾಗಬೇಕು ಅಂತ ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿ ಚುನಾವಣಾ ಪ್ರಚಾರ ಮುಗಿಸಿ ಕಲಬುರಗಿ ನಗರಕ್ಕೆ ಆಗಮಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ದೇವಲ ಗಾಣಗಾಪೂರಕ್ಕೆ ತೆರಳಿ ಶ್ರೀ ದತ್ತಾತ್ರೇಯನ ದರ್ಶನ ಪಡೆದರು.

371ಜೆ ಅನ್ವಯ ರಚನೆಗೊಂಡಿರುವ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ ಪ್ರತಿ ವರ್ಷ ಸಾವಿರಾರು ಕೋಟಿ ರೂ. ಅನುದಾನ ಬಿಡುಗಡೆಯಾಗುತ್ತಿದ್ದು, ಇದರ ಸದ್ಬಳಕೆಗೆ ಶೀಘ್ರದಲ್ಲಿಯೆ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಉಪಮುಖ್ಯಮಂತ್ರಿ  ಗೋವಿಂದ ಕಾರಜೋಳ ಅವರನ್ನು ಮಂಡಳಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಮದುವೆ ಸಂಭ್ರಮಾಚರಣೆ ವೇಳೆ ಹೈಡ್ರೋಜನ್ ಬಲೂನ್ ಸ್ಪೋಟ: ವಧು ವರರ ಕತೆ ಏನಾಯ್ತು

ಮಲ್ಲಿಕಾರ್ಜುನ ಖರ್ಗೆ ಜೊತೆಗೆ ಡಿಕೆ ಶಿವಕುಮಾರ್: ಭಾರೀ ಕುತೂಹಲ ಮೂಡಿಸಿದ ನಡೆ

Arecanut Price: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್, ಇಂದು ಬಂಪರ್ ಬೆಲೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಈ ಒಂದು ಕಾರಣಕ್ಕೆ ಸಿದ್ದರಾಮಯ್ಯ ಮೇಲೆ ರಾಹುಲ್ ಗಾಂಧಿಗೆ ಹೆಚ್ಚು ಒಲವು

ಮುಂದಿನ ಸುದ್ದಿ
Show comments