Select Your Language

Notifications

webdunia
webdunia
webdunia
webdunia

ಸಿಎಂ ಸಿದ್ದರಾಮಯ್ಯ ವಿರುದ್ಧ ಯಡಿಯೂರಪ್ಪ ಹೊಸ ಬಾಂಬ್

ಸಿಎಂ ಸಿದ್ದರಾಮಯ್ಯ ವಿರುದ್ಧ ಯಡಿಯೂರಪ್ಪ ಹೊಸ ಬಾಂಬ್
ಬೆಂಗಳೂರು , ಮಂಗಳವಾರ, 28 ಫೆಬ್ರವರಿ 2017 (19:12 IST)
ಸ್ಟೀಲ್ ಬ್ರಿಡ್ಜ್‌ ನಿರ್ಮಾಣಕ್ಕೆ ಸಂಬಂಧಿಸಿದಂತೆ 69 ಕೋಟಿ ರೂಪಾಯಿ ಲಂಚದ ಹಣವನ್ನು ಸಿಎಂ ಸಿದ್ದರಾಮಯ್ಯ ಕುಟುಂಬದ ಸದಸ್ಯರಿಗೆ ನೀಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೊಸ ಬಾಂಬ್ ಸಿಡಿಸಿದ್ದಾರೆ.
 
ವಿಧಾನಪರಿಷತ್ ಸದಸ್ಯ ಕಾಂಗ್ರೆಸ್ ಮುಖಂಡ ಗೋವಿಂದರಾಜು ಡೈರಿಯಲ್ಲಿ ಅಕ್ರಮ ಹಣವನ್ನು ಯಾವ ರೀತಿ ಸಾಗಿಸಲಾಗುತ್ತಿದೆ ಎನ್ನುವ ಬಗ್ಗೆ ಸಂಪೂರ್ಣ ವಿವರ ಲಭ್ಯವಾಗಿದೆ. ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಭ್ರಷ್ಟಾಚಾರವನ್ನೇ ಕಾಯಕವಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ.
 
ಸಿಎಂ ಸಿದ್ದರಾಮಯ್ಯ ಮತ್ತು ಅವರ ಸಹದ್ಯೋಗಿ ಸಚಿವರು ಕಾಂಗ್ರೆಸ್ ಪಕ್ಷದ ಹೈಕಮಾಂಡ್‌ಗೆ ಕಪ್ಪ ರವಾನಿಸಿರುವುದು ಸತ್ಯ.  ಡೈರಿಯಿಂದ ಸತ್ಯಾಂಶ ಬಹಿರಂಗವಾಗಿದೆ. ಮುಂಬರುವ ದಿನಗಳಲ್ಲಿ ಮತ್ತಷ್ಟು ಭ್ರಷ್ಟಾಚಾರ ಪ್ರಕರಣಗಳನ್ನು ಬಯಲಿಗೆಳೆಯುತ್ತೇನೆ ಎಂದು ಗುಡುಗಿದರು.
 
ಸಿಎಂ ಸಿದ್ದರಾಮಯ್ಯ ತಾವು ಯಾವುದೇ ತಪ್ಪು ಮಾಡಿಲ್ಲವೆಂದಾದಲ್ಲಿ ಡೈರಿ ಪ್ರಕರಣವನ್ನು ಸಿಬಿಐಗೆ ಒಪ್ಪಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸವಾಲ್ ಹಾಕಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಲಾಯರ್ ಕೆಲಸ ಬಿಟ್ಟು ವೇಶ್ಯಾವಾಟಿಕೆಗೆ ಬಂದ ಮಹಿಳೆ