ಬಸನಗೌಡ ಪಾಟೀಲ ಯತ್ನಾಳರೊಂದಿಗೆ ಯಡಿಯೂರಪ್ಪ ಗೌಪ್ಯ ಮಾತುಕತೆ

Webdunia
ಸೋಮವಾರ, 27 ನವೆಂಬರ್ 2017 (13:35 IST)
ಬಿಜೆಪಿ ಉಚ್ಚಾಟನೆಗೊಂಡಿರುವ ವಿಧಾನ ಪರಿಷತ್ ಸದಸ್ಯ ಬಸನಗೌಡ ಪಾಟೀಳ ಯತ್ನಾಳ ಅವರೊಂದಿಗೆ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ವಿಜಯಪುರದ ಪ್ರವಾಸಿ ಮಂದಿರದಲ್ಲಿ ಗೌಪ್ಯವಾಗಿ ಮಾತುಕತೆ ನಡೆಸಿದ್ದಾರೆ.
ಯಡಿಯೂರಪ್ಪ ಅವರಲ್ಲಿ ಬಿಜೆಪಿ ಪಕ್ಷ ಸೇರ್ಪಡೆಗೊಳ್ಳುವ ಇಂಗಿತವನ್ನು ಬಸನಗೌಡ ಪಾಟೀಲ ವ್ಯಕ್ತಪಡಿಸಿದ್ದು, ಆದ್ದರಿಂದ ಪಕ್ಷದಿಂದ ಮಾಡಿರುವ ಉಚ್ಚಾಟನೆಯನ್ನು ಹಿಂಪಡೆಯಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. ಇದಕ್ಕೆ ಯಡಿಯೂರಪ್ಪ ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ತಿಳಿದುಬಂದಿದೆ.
ಬಿಜೆಪಿ ಸೇರ್ಪಡೆಗೊಳ್ಳಲು ದೆಹಲಿ ಹಾಗೂ ಬೆಂಗಳೂರು ಕಡೆಯಿಂದ ಅನುಮತಿ ದೊರೆತಿದ್ದು, ಹುಬ್ಬಳ್ಳಿ ಕಡೆಯಿಂದ ಮಾತ್ರ ತೊಂದರೆಯಾಗಿದೆ. ಸದ್ಯದಲ್ಲೇ ಎಲ್ಲ ಬಗೆಹರಿಯಲಿದ್ದು, ಬಿಜೆಪಿ ಸೇರ್ಪಡೆ ಖಚಿತ ಎಂದು ಬಸನಗೌಡ ಪಾಟೀಲ ಹೇಳಿದ್ದಾರೆ.
ಬಿಜೆಪಿ ಸೇರ್ಪಡೆಗೆ ಯಾರೇ ವಿರೋಧ ಪಡಿಸಿದರೂ ಅವರನ್ನು ಸಮಾಧಾನ ಪಡಿಸಿ, ನಿಮ್ಮನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗುವುದು. ಅಲ್ಲಿಯವರೆಗೆ ಯಾವುದೇ ಆತುರದ ನಿರ್ಧಾರ ಕೈಗೊಳ್ಳದಂತೆ ಬಸನಗೌಡ ಪಾಟೀಲ ಯತ್ನಾಳ ಅವರಿಗೆ ಯಡಿಯೂರಪ್ಪ ಸಲಹೆ ಮಾಡಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಮನ್ನಾ ಭಾಟಿಯಾ ಅಭಿಮಾನಿಗಳಿಗೆ ಗುಡ್‌ನ್ಯೂಸ್‌

ಪುಣೆ: ಅಪ್ರಾಪ್ತ ಬಾಲಕಿಯ ಅತ್ಯಾಚಾರ, 18ವರ್ಷದ ಯುವಕ ಅರೆಸ್ಟ್‌

Indigo Crisis: ಇನ್ನೂ ಎಷ್ಟು ಲಗೇಜ್‌ಗಳು ಪ್ರಯಾಣಿಕರ ಕೈ ಸೇರಲಿದೆ ಗೊತ್ತಾ

ತಿರುಪತಿ, ಶಿರಡಿಗೆ ಸಂಪರ್ಕಿಸುವ ಎಕ್ಸ್‌ಪ್ರೆಸ್‌ಗೆ ಹಸಿರು ನಿಶಾನೆ, ಪ್ರಯಾಣಿಕರಿಗೆ ಗುಡ್‌ನ್ಯೂಸ್

ಸಾಲ ವಜಾ ಮಾಡಿದ್ದರಲ್ಲಿ ಮೋದಿಗೆ ಎಷ್ಟು ಪಾಲು ಹೋಗಿದೆ: ಸಿದ್ದರಾಮಯ್ಯ ವ್ಯಂಗ್ಯ

ಮುಂದಿನ ಸುದ್ದಿ
Show comments