Select Your Language

Notifications

webdunia
webdunia
webdunia
webdunia

ಧಾರಾವಾಹಿಯಂತೆ ಸಿದ್ದರಾಮಯ್ಯ, ಪರಮೇಶ್ವರ ಕಟ್ಟಳೆಗಳು ಇವೆ ಎಂದ ಬಿಎಸ್ವೈ

ಧಾರಾವಾಹಿಯಂತೆ ಸಿದ್ದರಾಮಯ್ಯ, ಪರಮೇಶ್ವರ ಕಟ್ಟಳೆಗಳು ಇವೆ ಎಂದ ಬಿಎಸ್ವೈ
ವಿಜಯಪುರ , ಗುರುವಾರ, 27 ಡಿಸೆಂಬರ್ 2018 (15:55 IST)
ರಾಜ್ಯ ಸರಕಾರದ ಮಂತ್ರಿ ಮಂಡಲ ವಿಸ್ತರಣೆ ಸಿದ್ದರಾಮಯ್ಯ ಹಾಗೂ ಪರಮೇಶ್ವರರ ಕಟ್ಟಳೆಗಳು ಧಾರಾವಾಹಿಯಂತೆ ಇವೆ, ಇದರಿಂದ ಅಭಿವೃದ್ಧಿ ಹಿನ್ನೆಡೆಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಟೀಕೆ ಮಾಡಿದ್ದಾರೆ.

ವಿಜಯಪುರ ನಗರದ ಪ್ರವಾಸಿ ಮಂದಿರದಲ್ಲಿ ಬಿ.ಎಸ್. ಯಡಿಯೂರಪ್ಪ ಹೇಳಿಕೆ ನೀಡಿದ್ದು, ಬೆಳಗಾವಿ ಅಧಿವೇಶನದಲ್ಲಿ ರಾಜ್ಯದ ಬರಗಾಲದ ಬಗ್ಗೆ ನಾವು ವಿಸ್ತಾರವಾದ ಚರ್ಚೆ ಮಾಡಿ ರಾಜ್ಯದ ಗಮನ ಸೆಳೆದಿದ್ದೇವೆ. ಅಧಿವೇಶನದಲ್ಲಿ ಬರಗಾಲ ಪೀಡಿತ ಪ್ರದೇಶಗಳನ್ನು ಘೋಷಣೆ ಮಾಡಬೇಕಿತ್ತು. ಆದರೆ ಇವಾಗ ಮಾಡಿದ್ದಾರೆ. ಕರ್ನಾಟಕದಲ್ಲಿ 157 ತಾಲೂಕುಗಳು ಬರಗಾಲಕ್ಕೆ ತುತ್ತಾಗಿವೆ. ಸಂಪುಟ ವಿಸ್ತರಣೆ ಕಚ್ಚಾಟದಲ್ಲಿ ರಾಜ್ಯದ ಅಭಿವೃದ್ಧಿ ಹಿನ್ನೆಡೆಯಾಗುತ್ತಿದೆ ಎಂದರು.

ಮೈತ್ರಿ ಸರ್ಕಾರದ ಕಚ್ಚಾಟದಿಂದ ಜನ ಬೇಸತ್ತಿದ್ದಾರೆ. ಇದು ನಾಡಿನ ಜನರಿಗೆ ಮಾಡಿದ ದ್ರೋಹ. ಈಗಲಾದರೂ ರಾಜ್ಯದ ಅಭಿವೃದ್ಧಿ ಬಗ್ಗೆ ಸರ್ಕಾರ ಚರ್ಚಿಸಬೇಕು. ಮಂತ್ರಿ ಪಟ್ಟ ಯಾರಿಗಾದರೂ ಕೊಡಲಿ, ಇದರ ಕಿತ್ತಾಟದಲ್ಲಿ ರಾಜ್ಯ ಅಭಿವೃದ್ಧಿ ಹಿನ್ನೆಡೆಯಾಗುತ್ತೆ ಎಂಬ ನೋವು ನಮಗಿದೆ ಎಂದರು.

ಸಮ್ಮಿಶ್ರ ಸರ್ಕಾರಕ್ಕೆ ಯಾರ ಧ್ವನಿಯೂ ಕೇಳಿಸಿಕೊಳ್ಳುವ ಕಿವಿ ಇಲ್ಲ. ಅವರದ್ದೇ ಆದ ಅರಾಜಕತೆ ಜಂಜಾಟದಲ್ಲಿ ತಲ್ಲೀನರಾಗಿದ್ದಾರೆ. ಅವರಿಗೆ ಕುರ್ಚಿ ಹಾಗು ಖಾತೆ ಉಳಿಸಿಕೊಳ್ಳುವುದು ಮುಖ್ಯವಾಗಿದೆ. ಇದರಲ್ಲೇ ಅವರು ತಲ್ಲೀನರಾಗಿದ್ದಾರೆ ಎಂದು ವ್ಯಂಗ್ಯವಾಡಿದರು.

ಬರ ಪೀಡಿತ ಪ್ರದೇಶಗಳಿಗೆ ಸಿಎಂ ಹಾಗೂ ಉಸ್ತುಅವರಿ ಸಚಿವರುಗಳು ಭೇಟಿ‌ ನೀಡಿಲ್ಲ. ಇದು ಎಷ್ಟರ ಮಟ್ಟಿಗೆ ಸರಿ ಎಂಬುದನ್ನು ಅವರಿಗೆ ಅವರೆ ಪ್ರಶ್ನೆ ಮಾಡಿಕೊಳ್ಳಬೇಕು ಎಂದು ಬಿ.ಎಸ್.ಯಡಿಯೂರಪ್ಪ ಹೇಳಿದರು.



Share this Story:

Follow Webdunia kannada

ಮುಂದಿನ ಸುದ್ದಿ

ಮಕ್ಕಳಿಗೆ ನೀಡಬೇಕಾದದ್ದು ಗುಂಡಿ ತೆಗೆದು ಹೂತಿಟ್ಟಿದ್ದು ಏಕೆ?