Webdunia - Bharat's app for daily news and videos

Install App

ಬಿಜೆಪಿ ಸರ್ಕಾರದಿಂದ ಹೈಕಮಾಂಡ್‌ಗೆ ಚೆಕ್ ಕಪ್ಪ: ಕುಮಾರಸ್ವಾಮಿ ಆರೋಪ

Webdunia
ಬುಧವಾರ, 22 ಫೆಬ್ರವರಿ 2017 (19:25 IST)
ಬಿಜೆಪಿ ಸರಕಾರ ಅಧಿಕಾರದಲ್ಲಿದ್ದಾಗ ಹೈಕಮಾಂಡ್‌ಗೆ ಚೆಕ್ ಮೂಲಕ ಕಪ್ಪು ನೀಡಿರುವುದು ಸಾಬೀತುಪಡಿಸಿದರೆ ಪ್ರಧಾನಿ ಮೋದಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ಕೊಡ್ತಾರಾ ಎಂದು ಮಾಜಿ ಸಿಎಂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಸವಾಲ್ ಹಾಕಿದ್ದಾರೆ.
 
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಬಿಜೆಪಿ ಹೈಕಮಾಂಡ್‌ಗೆ ಚೆಕ್ ಮೂಲಕ ಕಪ್ಪ ನೀಡಿರುವ ದಾಖಲೆ ನನ್ನ ಬಳಿಯಿವೆ. ಒಂದು ವೇಳೆ, ದಾಖಲೆ ಬಿಡುಗಡೆಗೊಳಿಸಿದರೆ ರಾಜೀನಾಮೆ ನೀಡುತ್ತಾರೆ ಎಂದು ಪ್ರಶ್ನಿಸಿದ್ದಾರೆ.
 
ಸಿಎಂ ಸಿದ್ದರಾಮಯ್ಯ ಮತ್ತು ಯಡಿಯೂರಪ್ಪ ಕಪ್ಪ ವಿಚಾರ ಕುರಿತಂತೆ ಪರಸ್ಪರ ಆರೋಪ ಪ್ರತ್ಯಾರೋಪಗಳಲ್ಲಿ ತೊಡಗಿಕೊಂಡು ರಾಜ್ಯದ ಜನತೆಗೆ ಪುಕ್ಕಟೆ ಮನೋರಂಜನೆ ಒದಗಿಸುತ್ತಿದ್ದಾರೆ ಎಂದು ಲೇವಡಿ ಮಾಡಿದರು.
 
ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ರಾಜ್ಯವನ್ನು ಲೂಟಿ ಹೊಡೆಯುವಲ್ಲಿ ನಿರತವಾಗಿವೆ. ರಾಷ್ಟ್ರೀಯ ಪಕ್ಷಗಳಿಂದ ರಾಜ್ಯ ಏಳಿಗೆ ಸಾಧ್ಯವಿಲ್ಲ ಎನ್ನುವುದನ್ನು ಸಾಬೀತುಪಡಿಸಿದ್ದಾರೆ ಎಂದು ಕಿಡಿಕಾರಿದರು. 
 
ಪ್ರಾದೇಶಿಕ ಪಕ್ಷದಿಂದ ಮಾತ್ರ ರಾಜ್ಯದ ಹಿತ ಕಾಪಾಡಲು ಸಾಧ್ಯ ಎಂದು ಮಾಜಿ ಸಿಎಂ ಕುಮಾರಸ್ವಾಮಿ ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments