Publish Date: Fri, 05 Jan 2018 (19:50 IST)
Updated Date: Fri, 05 Jan 2018 (19:52 IST)
ಹೋದ ಕಡೆಯಲ್ಲೆಲ್ಲಾ ರಕ್ತದಲ್ಲಿ ಬರೆದುಕೊಡುತ್ತೇನೆ ಎಂದು ಹೇಳುವ ಬಿಎಸ್ ಯಡಿಯೂರಪ್ಪ ಅವರಲ್ಲಿ ಎಷ್ಟು ರಕ್ತವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.
ಮೂಡಿಗೆರೆಯಲ್ಲಿ ಮಾತನಾಡಿದ ಅವರು, ಜನ ಅಧಿಕಾರ ನೀಡಿದಾಗ ಏನು ಮಾಡಿದರು ಎಂಬುದನ್ನು ಗಣನೆಗೆ ತೆಗೆದುಕೊಳ್ಳುತ್ತಾರೆ. ಹಾಗೇ ನೋಡಿದ್ರೆ, ಯಡಿಯೂರಪ್ಪ ಜೈಲಿಗೆ ಹೋಗಿದ್ರು ಅನ್ನೋದೆ ದೊಡ್ಡದು. ಆದ್ದರಿಂದ ರಕ್ತದಲ್ಲಿ ಬರೆದುಕೊಡುತ್ತೇನೆ ಎಂದು ಸುಳ್ಳು ಹೇಳುವುದರಿಂದ ಏನೂ ಆಗುವುದಿಲ್ಲ ಎಂದು ವ್ಯಂಗವಾಡಿದ್ದಾರೆ.
ಬಿಜೆಪಿ ಆಡಳಿತದ ಅವಧಿಯಲ್ಲಿ ಏಳೆಂಟು ಜನ ಜೈಲಿಗೆ ಹೋಗಿದ್ದು, ಸದನದಲ್ಲಿ ಬ್ಲೂಫಿಲಂ ನೋಡಿದ್ದರು ಎಂಬುದು ಇನ್ನೂ ಮರೆತಿಲ್ಲ ಎಂದಿದ್ದಾರೆ.
ಕೋಮುಭಾವನೆ ಕೆರಳಿಸುವ ಎಲ್ಲ ಸಂಘಟನೆಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುತ್ತೇವೆ. ಪಿಎಫ್‍ಐ, ಬಜರಂಗದಳ, ಶ್ರೀರಾಮಸೇನೆ ಯಾವುದೇ ಆಗಿದ್ದರೂ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.