Publish Date: Tue, 26 Feb 2019 (07:26 IST)
Updated Date: Tue, 26 Feb 2019 (07:29 IST)
ಬೆಂಗಳೂರು : ಯಾವಾಗಲೂ ಒಬ್ಬರ ಮೇಲೊಬ್ಬರು ಟೀಕೆಗಳನ್ನು ಮಾಡುತ್ತಾ ಹಾವು ಮುಂಗುಸಿಯಂತೆ ವರ್ತಿಸುತ್ತಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹಾಗೂ ಮಾಜಿ ಸಿಎಂ ಸಿದ್ಧರಾಮಯ್ಯ ಅವರು ವಿಮಾನ ನಿಲ್ದಾಣದಲ್ಲಿ ಕೆಲವು ನಿಮಿಷಗಳ ಕಾಲ ಕುಶಲೋಪರಿ ನಡೆಸಿದ್ದು ಹಲವು ಕುತೂಹಲಗಳಿಗೆ ಕಾರಣವಾಗಿದೆ.
ನಿನ್ನೆ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಬೆಂಗಳೂರಿನಿಂದ ಒಂದೇ ವಿಮಾನದಲ್ಲಿ ಹುಬ್ಬಳ್ಳಿಗೆ ಆಗಮಿಸಿದ ಯಡಿಯೂರಪ್ಪ ಹಾಗೂ ಸಿದ್ಧರಾಮಯ್ಯ ಅವರು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಪರಸ್ಪರ ಭೇಟಿಯಾಗಿ ಹಸ್ತಲಾಘವ ಮಾಡಿ ಕೆಲವು ನಿಮಿಷಗಳ ಕಾಲ ಆತ್ಮೀಯವಾಗಿ ಕುಶಲೋಪರಿ ನಡೆಸಿದ್ದರು.
ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಬಳಿಕ ಸಿದ್ದರಾಮಯ್ಯ ತಮ್ಮ ಫೇಸ್‌ಬುಕ್ ನಲ್ಲಿ ರಾಜಕೀಯದ ಹೊರತಾಗಿ ನಾನು ಮತ್ತು ಯಡಿಯೂರಪ್ಪ ಅತ್ಯಂತ ಆಪ್ತ ಸ್ನೇಹಿತರು ಎಂದು ಬರೆದುಕೊಂಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.