ಜೆಡಿಎಸ್ ಕ್ಷೇತ್ರಗಳ ಮೇಲೆ ನನ್ನ ಕಣ್ಣು ಎಂದ ಯಡಿಯೂರಪ್ಪ

Webdunia
ಶನಿವಾರ, 29 ಜೂನ್ 2019 (16:58 IST)
ರಾಜ್ಯದಲ್ಲಿ ಯಾವಾಗ ಚುನಾವಣೆ ಬಂದರೂ ನನ್ನ ಕಣ್ಣು 44 ಕ್ಷೇತ್ರಗಳ ಮೇಲೆ ಇರುತ್ತದೆ. ಹೀಗಂತ ಬಿಜೆಪಿ ರಾಜ್ಯಾಧ್ಯಕ್ಷ ಪರೋಕ್ಷವಾಗಿ ಜೆಡಿಎಸ್ ಶಾಸಕರಿಗೆ ಟಾಂಗ್ ನೀಡಿದ್ದಾರೆ.

ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿಕೆ ನೀಡಿದ್ದು, ಸಮ್ಮಿಶ್ರ ಸರ್ಕಾರ ಇದ್ದ ರಾಜ್ಯದಲ್ಲಿ ಬಿಜೆಪಿಗೆ  25+1 ಸ್ಥಾನ ಕಾರ್ಯಕರ್ತರಿಂದ ಬಂದಿದೆ.

ಇಂದು ಅನಂತಕುಮಾರ್ ಬದುಕಿರಬೇಕಾಗಿತ್ತು. ಯಾರೂ ಇಲ್ಲದೇ ಇದ್ದ ಸಮಯದಲ್ಲಿ ನಾವು ಇಬ್ಬರು ರಾಜ್ಯಾದ್ಯಂತ ಓಡಾಡಿ ಪಕ್ಷ ಕಟ್ಟಿದ್ದೇವೆ. ಬೆಂಗಳೂರಿನಲ್ಲಿ ನಾವು 11 ವಿಧಾನಸಭೆ ಕ್ಷೇತ್ರ ಮಾತ್ರ ಗೆದ್ದಿದ್ದೇವೆ. ಬೆಂಗಳೂರಿನ ಸಂಸದರು ಇವತ್ತೇ‌ ನಿರ್ಧಾರ ಮಾಡಿ, ಯಾವಾಗ ಚುನಾವಣೆ ಬಂದರೂ 21 ಕ್ಕಿಂತ ಹೆಚ್ಚು ಸ್ಥಾನ ಗೆಲ್ಲುವ ಬಗ್ಗೆ ನಿರ್ಧಾರ ಮಾಡಿ ಎಂದರು.

44 ವಿಧಾನಸಭಾ ಕ್ಷೇತ್ರಗಳ ಕಡೆ ನಾನು ಹೆಚ್ಚು ಗಮನ ಕೊಡಲು ಪ್ರಾರಂಭಿಸಿದ್ದೇನೆ. ಸಂಸತ್ ಅಧಿವೇಶನ ಮುಗಿದ ಬಳಿಕ ಸಂಸದರು ಸದಸ್ಯತ್ವ ಅಭಿಯಾನದಲ್ಲಿ ತೊಡಗಿಸಿಕೊಳ್ಳಬೇಕು. ಅನಂತಕುಮಾರ್ ಪ್ರಯತ್ನದಿಂದ ಸಬ್ ಅರ್ಬನ್ ರೈಲಿಗೆ 17 ಸಾವಿರ ಕೋಟಿ ಬಜೆಟ್ ನಲ್ಲಿ‌ ಸೇರಿದೆ.

ಆದರೆ ಒಂದೇ ಒಂದು ಕೊರಗು ಇದೆ. ಇಂತಹ ಸಂದರ್ಭದಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇರಬೇಕಾಗಿತ್ತು. ಯಾವನು ಇದ್ದಾನೆ ವಿಧಾನಸೌಧದಲ್ಲಿ ಕೆಲಸ ಮಾಡೋನು? ಮೋದಿಗೆ ವೋಟ್ ಹಾಕಿದೀರಾ ಅವರ ಬಳಿಯೇ ಹೋಗಿ ಅಂತಾ ಸೊಕ್ಕಿನ ಮಾತಾಡುವವರಿಗೆ ಜನ ಉತ್ತರ ಕೊಡ್ತಾರೆ ಅಂತ ಸಿಎಂ ವಿರುದ್ಧ ಯಡಿಯೂರಪ್ಪ ಕಿಡಿಕಾರಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments