ಯಾವುದೇ ಕಾರಣಕ್ಕೂ ಯಾರ ಜೊತೆಗೂ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ಹೀಗಂತ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಉಪಚುನಾವಣೆ ಫಲಿತಾಂಶ ಬಂದ ಬಳಿಕ ಬಿಜೆಪಿ ನಡೆ ಏನು ಅನ್ನೋದು ಗೊತ್ತಾಗುತ್ತೆ ಅನ್ನೋ ಮೂಲಕ ಜೆಡಿಎಸ್ ಜೊತೆಗಿನ ಹೊಂದಾಣಿಕೆ ಮಾಡಿಕೊಳ್ಳೋದಿಲ್ಲ ಅಂತ ಖಡಕ್ ಆಗಿ ಹೇಳಿದ್ದಾರೆ.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲೆಡೆ ಅಭಿವೃದ್ಧಿ, ಎಲ್ಲರ ಹಿತ ಕಾಯುವಂತಹ ಕೆಲಸ ಮಾಡಲೇಬೇಕು. ನನ್ನ ಕರ್ತವ್ಯವನ್ನು ನಾನು ಮಾಡುತ್ತಿದ್ದೇನೆ ಅಂತ ಯಡಿಯೂರಪ್ಪ ಹೇಳಿದ್ದಾರೆ.