Publish Date: Sat, 06 May 2017 (11:26 IST)
Updated Date: Sat, 06 May 2017 (11:29 IST)
ರಾಜ್ಯ ಕಾರ್ಯಕಾರಿಣಿ ವೇದಿಕೆಗೆ ಆಗಮಿಸಿದ ಈಶ್ವರಪ್ಪ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರಿಗೆ ಕೈ ಮುಗಿದ್ರೂ ಯಡಿಯೂರಪ್ಪ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ ಎನ್ನಲಾಗಿದೆ.
ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಕುರಿತಂತೆ ಯಡಿಯೂರಪ್ಪ ಮತ್ತು ಈಶ್ವರಪ್ಪ ಮಧ್ಯೆ ಉಂಟಾದ ಬಿಕ್ಕಟ್ಟು ಅಂತ್ಯವಾಗುವ ಲಕ್ಷಣಗಳು ಗೋಚರಿಸುತ್ತಿಲ್ಲ. ಇಬ್ಬರ ನಾಯಕರ ವೈಮನಸ್ಸಿನಿಂದಾಗಿ ಪಕ್ಷದ ಕಾರ್ಯಕರ್ತರು ತ್ರಿಶಂಕು ಸ್ಥಿತಿಗೆ ತಲುಪಿದ್ದಾರೆ ಎನ್ನಲಾಗುತ್ತಿದೆ
ರಾಜ್ಯ ಕಾರ್ಯಕಾರಿಣಿಯಲ್ಲಿರುವ ಅಜೆಂಡಾದ ಬಗ್ಗೆ ಮಾತನಾಡಬೇಕು. ವೈಯಕ್ತಿಕ ವಿಚಾರಗಳನ್ನು ಯಾವುದೇ ಕಾರಣಕ್ಕೂ ಪ್ರಸ್ತಾಪಿಸಬಾರದು ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಮುರಳಿಧರ್ ರಾವ್ ಕಟ್ಟಪ್ಪಣೆ ಹೊರಡಿಸಿದ್ದರೂ ಉಭಯ ನಾಯಕರು ತಮ್ಮದೇ ಧೋರಣೆಯನ್ನು ಮುಂದುವರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಒಂದು ವೇಳೆ ಯಾರಾದ್ರೂ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ರೆ ಶಿಸ್ತು ಕ್ರಮ ಖಚಿತ.ಕಾರ್ಯಕಾರಿಣಿ ಸಭೆಯ ನಂತರ ಬಿಕ್ಕಟ್ಟು ಅಂತ್ಯವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.