Publish Date: Sat, 16 Dec 2017 (20:23 IST)
Updated Date: Sat, 16 Dec 2017 (21:16 IST)
ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದ್ದು, ಬಿ.ಎಸ್.ಯಡಿಯೂರಪ್ಪ ಅವರು ಮತ್ತೆ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ಭವಿಷ್ಯ ನುಡಿದ್ದಾರೆ.
ಪದ್ಮನಾಭನಗರ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಅವರ ನೇತೃತ್ವದ ಪರಿವರ್ತನಾ ಯಾತ್ರೆಗೆ ರಾಜ್ಯಾದ್ಯಂತ ಉತ್ತಮ ಜನಬೆಂಬಲ ವ್ಯಕ್ತವಾಗುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಮಿತಿಮೀರಿದ್ದು, ಸಿದ್ದರಾಮಯ್ಯ ಅವರನ್ನು ಮನೆಗೆ ಕಳುಹಿಸಿ ಬಿಜೆಪಿಯನ್ನು ಆಶೀರ್ವದಿಸಲು ರಾಜ್ಯದ ಮತದಾರರು ತೀರ್ಮಾನ ಮಾಡಿದ್ದಾರೆ ಎಂದಿದ್ದಾರೆ.
ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದ್ದು, ಅದೇ ಫಲಿತಾಂಶ ರಾಜ್ಯ ವಿಧಾನಸಭಾ ಚುನಾವಣೆಯಲ್ಲೂ ಪುನರಾವರ್ತನೆಯಾಗಲಿದೆ ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.