Publish Date: Fri, 02 Feb 2018 (19:40 IST)
Updated Date: Fri, 02 Feb 2018 (19:42 IST)
ನಗರದ ಅರಮನೆ ಮೈದಾನದಲ್ಲಿ ಪ್ರಧಾನಮಂತ್ರಿ ನರೇಂದ್ರಮೋದಿ ಭಾಗವಹಿಸುವ ಫೆಬ್ರುವರಿ 4ರ ಕಾರ್ಯಕ್ರಮದ ಸಿದ್ಧತೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಪರಿಶೀಲನೆ ನಡೆಸಿದರು.
ಬಿಜೆಪಿ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ನಾಲ್ಕು ಜನ ಪಾಲ್ಗೊಳ್ಳುವ ನಿರೀಕ್ಷೆಯಿದ್ದು, ಯಾವುದೇ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಕಾರ್ಯಕ್ರಮದ ವೇದಿಕೆ ಸೇರಿದಂತೆ ವಿವಿಧ ವ್ಯವಸ್ಥೆಗಳನ್ನು ಪರಿಶೀಲನೆ ನಡೆಸಿ ಮಾಹಿತಿ ಪಡೆದರು.
ಕಾರ್ಯಕ್ರಮದಲ್ಲಿ ಭಾಗವಹಿಸುವ ಜನರಿಗೆ ಊಟದ ವ್ಯವಸ್ಥೆ ಮಾಡಲು 600 ಮಂದಿ ಬಾಣಸಿಗರನ್ನು ನಿಯೋಜನೆ ಮಾಡಲಾಗಿದೆ. 250 ಕೌಂಟರ್‌ಗಳ ವ್ಯವಸ್ಥೆ ಮಾಡಲಾಗಿದೆ. ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಸ್ವಚ್ಛತೆ ಕಾಪಾಡಲು ಆದ್ಯತೆ ನೀಡಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.