Select Your Language

Notifications

webdunia
webdunia
webdunia
Sunday, 13 April 2025
webdunia

ಯಡಿಯೂರಪ್ಪ, ಬೊಮ್ಮಾಯಿ ಅವಧಿಯಲ್ಲೇ ಹೆಚ್ಚು ವಕ್ಫ್ ನೋಟಿಸ್: ಬಿಜೆಪಿ ವಿರುದ್ಧ ಪರಮೇಶ್ವರ ಗರಂ

Former CM Yeddyurappa

Sampriya

ಬೆಂಗಳೂರು , ಸೋಮವಾರ, 25 ನವೆಂಬರ್ 2024 (14:22 IST)
ಬೆಂಗಳೂರು: ಬಿ.ಎಸ್. ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ರೈತರಿಗೆ ಹೆಚ್ಚು ನೋಟಿಸ್ ನೀಡಲಾಗಿದೆ. ರೈತರಿಗೆ ವಕ್ಫ್ ನೋಟಿಸ್ ವಿಚಾರದಲ್ಲಿ ನಮ್ಮ ಸರ್ಕಾರದ ಮೇಲೆ ಮಾಡುತ್ತಿದ್ದ ಬಿಜೆಪಿಯವರ ಆಪಾದನೆ ಏನೆಂಬ ಸತ್ಯ ಈಗ ಬಯಲಾಗಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು.

ಮಾಜಿ ಶಾಸಕ ಕುಮಾರ ಬಂಗಾರಪ್ಪ ಅವರ ಅಧ್ಯಕ್ಷತೆಯಲ್ಲಿ ಸಮಿತಿ ಮಾಡಿ ನೋಟಿಸ್ ಜಾರಿ ಮಾಡಿದ್ದಾರೆ. ಸುಮಾರು 2,900 ಎಕರೆಗೆ ನೋಟಿಸ್ ನೀಡಿದ್ದಾರೆ. ಸಿದ್ದರಾಮಯ್ಯನವರ ಕಾಲದಲ್ಲಿ ಕೇವಲ 300 ಎಕರೆಗೆ ನೋಟಿಸ್ ನೀಡಲಾಗಿದೆ. ವಕ್ಫ್ ವಿಚಾರ ಇಟ್ಟುಕೊಂಡು ರಾಜ್ಯ ಸುತ್ತಲು ಹೊರಟಿರುವ ಬಿಜೆಪಿ ನಾಯಕರು, ಯಾರು ಜಾಸ್ತಿ ನೋಟಿಸ್ ನೀಡಿದ್ದು? ಯಾರ ಮೇಲೆ‌ ಆಪಾದನೆ ಮಾಡಬೇಕು? ಎಂಬುದನ್ನು ಈಗಲಾದರು ಅರ್ಥ ಮಾಡಿಕೊಳ್ಳಬೇಕು' ಎಂದರು.

ಸತ್ಯವನ್ನು ಯಾವತ್ತೂ ಹೆಚ್ಚು ದಿನ ಮುಚ್ಚಿಡಲು ಆಗುವುದಿಲ್ಲ. ರೈತರಿಗೆ ನೋಟಿಸ್ ಕೊಡ್ಡಿದ್ದೇವೆ ಎಂದು ನಮ್ಮ ಸರ್ಕಾರದ ಮೇಲೆ ಆಪಾದನೆ ಮಾಡುತ್ತಿದ್ದರು. ಈಗ ಬಿಜೆಪಿಯವರು ಏನು ಹೇಳುತ್ತಾರೆ ಎಂದು ಪ್ರಶ್ನಿಸಿದರು.

ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರು ವಕ್ಫ್ ವಿಚಾರದಲ್ಲಿ ಬಿಜೆಪಿಯವರ ಮುಖಭಂಗ ಮಾಡಲು ಹೋರಾಟಕ್ಕೆ ಮುಂದಾಗಿದ್ದಾರೆ. ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ಅವಧಿಯಲ್ಲಿ ಹೆಚ್ಚು ನೋಟಿಸ್ ಕೊಟ್ಟಿರುವುದು ಗೊತ್ತಾಗಿಯೇ ಬಿಜೆಪಿಯವರಿಗೆ ಮುಜುಗರ ಮಾಡಲು ಹೋರಾಟ ಮಾಡುತ್ತಿದ್ದಾರೆ ಎಂದು ಕುಟುಕಿದರು.

ನಾವು ವಿರೋಧ ಪಕ್ಷದಲ್ಲಿದ್ದಾಗ ರೈತರಿಗೆ ನೋಟಿಸ್ ನೀಡಿರುವ ವಿಚಾರ ನಮ್ಮ ಗಮನಕ್ಕೆ ಬಂದಿಲ್ಲ. ಹೀಗಾಗಿ ನಾವು ಆ ವಿಚಾರವನ್ನು ಕೈಗೆತ್ತಿಕೊಂಡಿಲ್ಲ. ಈಗ ನಮ್ಮ ಗಮನಕ್ಕೆ ಬಂದಿದೆ. ಎಚ್ಚರಿಕೆ ವಹಿಸಿಕೊಂಡು ಕೆಲಸ ಮಾಡುತ್ತೇವೆ ಎಂದು ಹೇಳಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಮೂರು ಕ್ಷೇತ್ರಗಳನ್ನು ಗೆದ್ದ ಮಾತ್ರಕ್ಕೆ ಕಾಂಗ್ರೆಸ್ ಹಗರಣವೇ ಮಾಡಿಲ್ಲ ಎಂದಲ್ಲ: ಪಿ ರಾಜೀವ್