ಹೈಕಮಾಂಡ್‌ಗೆ ಸಾವಿರ ಕೋಟಿ ನೀಡಿರುವುದು ಸಾಬೀತುಪಡಿಸಿ: ಬಿಎಸ್‌ವೈಗೆ ಸಿಎಂ ಸವಾಲ್

Webdunia
ಶನಿವಾರ, 11 ಫೆಬ್ರವರಿ 2017 (17:11 IST)
ರಾಜ್ಯದಲ್ಲಿ ಅಧಿಕಾರರೂಢವಾಗಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರ ಕಾಂಗ್ರೆಸ್ ಹೈಕಮಾಂಡ್‌ಗೆ ಒಂದು ಸಾವಿರ ಕೋಟಿ ಹಣ ಸಂದಾಯ ಮಾಡಿದೆ ಎನ್ನುವ ಬಿಎಸ್‌ವೈ ಆರೋಪದಲ್ಲಿ ಸತ್ಯಾಂಶವಿಲ್ಲ. ಒಂದು ವೇಳೆ ದಾಖಲೆಗಳಿದ್ದರೆ ಸಾಬೀತುಪಡಿಸಿ ಎಂದು ಸಿಎಂ ಸಿದ್ದರಾಮಯ್ಯ ಯಡಿಯೂರಪ್ಪಗೆ ಸವಾಲ್ ಹಾಕಿದ್ದಾರೆ.  
 
ಮುಖ್ಯಮಂತ್ರಿಯಂತಹ ಉನ್ನತ ಅಧಿಕಾರ ಅನುಭವಿಸಿರುವ ಯಡಿಯೂರಪ್ಪ ಬೇಜವಾಬ್ದಾರಿಯಿಂದ ವರ್ತಿಸಬಾರದು. ಯಡಿಯೂರಪ್ಪ ಆರೋಪ ಸಾಬೀತುಪಡಿಸಲಿ ಇಲ್ಲವೇ ರಾಜಕೀಯದಿಂದ ನಿವೃತ್ತಿ ಹೊಂದಲಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ಇದೇ ಸಂದರ್ಭದಲ್ಲಿ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ಸುಳ್ಳು ಆರೋಪಗಳನ್ನು ಮಾಡುವಲ್ಲಿ ಬಿಜೆಪಿಯವರು ನಿಸ್ಸಿಮರು. ಅವರ ಯಾವುದೇ ಆರೋಪಗಳಿಗೆ ದಾಖಲೆಗಳಿರುವುದಿಲ್ಲ ಎಂದು ಲೇವಡಿ ಮಾಡಿದರು. 
 
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಲಗೈ ಬಂಟರಾಗಿರುವ ಎಂಎಲ್‌ಸಿ ಗೋವಿಂದರಾಜು ಮುಖಾಂತರ ಹೈಕಮಾಂಡ್‌ನ ಕಾಂಗ್ರೆಸ್ ಮುಖಂಡರಿಗೆ 1 ಸಾವಿರ ಕೋಟಿ ರೂ ಹಣ ಸಂದಾಯ ಮಾಡಲಾಗಿದೆ ಎಂದು ಯಡಿಯೂರಪ್ಪ ಆರೋಪಿಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಟ್ಟೆ ಪ್ರಿಯರೇ ಹುಷಾರ್ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ಕೌಟುಂಬಿಕ ಕಲಹಕ್ಕೆ ಪತ್ನಿಯನ್ನು ಮುಗಿಸಿ, ತಾನೂ ಆತ್ಮಹತ್ಯೆಗೆ ಶರಣಾದ ಪತಿ

ಬಿಹಾರ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ಸಂಜಯ್ ಸರೋಗಿ ಹೆಗಲಿಗೆ

ಮದ್ಯಪಾನ ಪಾರ್ಟಿ ವೇಳೆ ಜಗಳ, ಒಬ್ಬನ ಹತ್ಯೆಯಲ್ಲಿ ಅಂತ್ಯ

ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ನಿತಿನ್ ನಬಿನ್

ಮುಂದಿನ ಸುದ್ದಿ
Show comments