Select Your Language

Notifications

webdunia
webdunia
webdunia
webdunia

ಬಿಎಸ್‌ವೈ ನೀತಿ ಪಕ್ಷಕ್ಕೆ ವಿರುದ್ಧವಾಗಿದೆ: ಕೆ.ಎಸ್‌.ಈಶ್ವರಪ್ಪ

ಬಿಎಸ್‌ವೈ ನೀತಿ ಪಕ್ಷಕ್ಕೆ ವಿರುದ್ಧವಾಗಿದೆ: ಕೆ.ಎಸ್‌.ಈಶ್ವರಪ್ಪ
ಬೆಂಗಳೂರು , ಸೋಮವಾರ, 4 ಜುಲೈ 2016 (11:26 IST)
ಪಕ್ಷದ ಪದಾಧಿಕಾರಿಗಳ ಪಟ್ಟಿ ಆಯ್ಕೆ ವಿಚಾರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅನುಸರಿಸುತ್ತಿರುವ ನೀತಿ ಪಕ್ಷದ ಪದ್ಧತಿಗೆ ವಿರುದ್ಧವಾಗಿದೆ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್‌.ಈಶ್ವರಪ್ಪ ಹೇಳಿದ್ದಾರೆ.
 
ಪಕ್ಷದ ಪದಾಧಿಕಾರಿಗಳ ಪಟ್ಟಿ ಆಯ್ಕೆ ವಿಚಾರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರು ಅನುಸರಿಸುತ್ತಿರುವ ಏಕಪಕ್ಷೀಯ ನಿರ್ಧಾರ ಕುರಿತು ವರಿಷ್ಠರಿಗೆ ದೂರು ನೀಡಲು ದೆಹಲಿಗೆ ತೆರಳಿದ ಕೆ.ಎಸ್‌.ಈಶ್ವರಪ್ಪ ಇಂದು ವಾಪಸ್ಸಾದರು. ಈ ಸಂದರ್ಭದಲ್ಲಿ ಬೆಂಗಳೂರಿನ ಕೆಂಪೆಗೌಡ ವಿಮಾನ ನಿಲ್ದಾನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಬಿಜೆಪಿಯಲ್ಲಿ ಆಗುತ್ತಿರುವ ಬದಲಾವಣೆ ಕುರಿತು ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ರಾಮ್‌ಲಾಲ್ ಜೀ ಅವರ ಗಮನಕ್ಕೆ ತಂದದ್ದೇನೆ ಎಂದು ತಿಳಿಸಿದರು.
 
ಪಕ್ಷದ ಪದಾಧಿಕಾರಿಗಳ ನೇಮಕ ಮಾಡುವಲ್ಲಿ ಬಿ.ಎಸ್‌.ಯಡಿಯೂರಪ್ಪ ಏಕಪಕ್ಷೀಯ ನಿರ್ಧಾರ ಕೈಗೊಂಡಿದ್ದು, ಪಕ್ಷದ ಹಿರಿಯ ನಾಯಕರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ಈ ಎಲ್ಲಾ ವಿಚಾರಗಳನ್ನು ಪಕ್ಷದ ಸಂಘಟನಾ ಕಾರ್ಯದರ್ಶಿಗಳ ಗಮನಕ್ಕೆ ತಂದಿದ್ದೇನೆ ಎಂದು ತಿಳಿಸಿದರು.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಜೆಡಿಎಸ್ ಶಾಸಕರ ಪಕ್ಕ ಕುಳಿತುಕೊಳ್ಳಲು ಮುಜುಗರವಿಲ್ಲ: ಚಲುವುರಾಯಸ್ವಾಮಿ