Publish Date: Mon, 04 Dec 2017 (09:37 IST)
Updated Date: Mon, 04 Dec 2017 (09:41 IST)
ಬಿಜೆಪಿ ರಾಜ್ಯಾಧ್ಯಾಕ್ಷ ಬಿ.ಎಸ್.ಯಡಿಯೂರಪ್ಪ ಅವರೇ ಮುಂದಿನ ಮುಖ್ಯಮಂತ್ರಿ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಭಿನ್ನಮತದಿಂದ ಗೊಂದಲ ಆಗಿದೆ. ಆದರೆ, ಅದನ್ನು ಸರಿಪಡಿಸಿಕೊಂಡು ಮುನ್ನಡೆಯುತ್ತೇವೆ ಎಂದರು.
ಪಕ್ಷ ಬೆಳೆಯುತ್ತಿರುವುದರಿಂದ ಗೊಂದಲ ಹಾಗೂ ಭಿನ್ನಮತ ಇದೆ. ಎಲ್ಲವನ್ನು ಬಗೆಹರಿಸಿಕೊಂಡು ಯಡಿಯೂರಪ್ಪ ಅವರನ್ನು ಮುಂದಿನ ಮುಖ್ಯಮಂತ್ರಿಯನ್ನಾಗಿ ಮಾಡಲಾಗುತ್ತದೆ ಎಂದು ತಿಳಿಸಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.