Publish Date: Thu, 31 Oct 2019 (12:01 IST)
Updated Date: Thu, 31 Oct 2019 (12:03 IST)
ಬೆಂಗಳೂರು : ಮಾಜಿ ಸಿಎಂ ಸಿದ್ದರಾಮಯ್ಯ ಅವರ ಬಗ್ಗೆ ಸಿಎಂ ಯಡಿಯೂರಪ್ಪ ಹೇಳಿದ ಈ ಹೇಳಿಕೆಯೊಂದು ಸುಳ್ಳು ಎಂದು ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.
ಇತ್ತೀಚೆಗೆ ನೆರೆಪರಿಹಾರದ ಬಗ್ಗೆ ಆರೋಪ ಮಾಡಿದ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದ ಸಿಎಂ ಯಡಿಯೂರಪ್ಪ, ಸಿದ್ದರಾಮಯ್ಯ ಪರ್ಮನೆಂಟ್ ಆಗಿ ವಿರೋಧ ಪಕ್ಷದಲ್ಲೇ ಇರುತ್ತಾರೆ ಎಂದು ಹೇಳಿದ್ದಾರೆ. ಇದಕ್ಕೆ ಈಗ ಪ್ರತಿಕ್ರಿಯೆ ನೀಡಿರುವ ಈಶ್ವರಪ್ಪ ಸಿಎಂ ಯಡಿಯೂರಪ್ಪ ನವರ ಈ ಹೇಳಿಕೆ ಸುಳ್ಳು ಎಂದು ಹೇಳಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಎಸ್ ಈಶ್ವರಪ್ಪ, ಯಡಿಯೂರಪ್ಪನವರ ಈ ಹೇಳಿಕೆ ಸುಳ್ಳು. ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷದಲ್ಲೇ ಇರುವುದಿಲ್ಲ. ಅವರನ್ನು ಕಾಂಗ್ರೆಸ್ ನವರು ವಿರೋಧ ಪಕ್ಷದ ಸ್ಥಾನದಿಂದ ಕಿತ್ತು ಹಾಕುತ್ತಾರೆ ಎಂದು ಹೇಳಿದ್ದಾರೆ.