Webdunia - Bharat's app for daily news and videos

Install App

24 ಗಂಟೆಯಲ್ಲೇ ರೈತರ ಸಾಲ ಮನ್ನಾ ಎಂದ ಯಡಿಯೂರಪ್ಪ

Webdunia
ಭಾನುವಾರ, 8 ಮಾರ್ಚ್ 2020 (14:41 IST)
ರೈತರ ಸಾಲವನ್ನು 24 ಗಂಟೆಗಳಲ್ಲೇ ಮನ್ನಾ ಮಾಡಲಾಗುತ್ತದೆ. ಹೀಗಂತ ಮುಖ್ಯಮಂತ್ರಿ ಹೇಳಿದ್ದಾರೆ.

ರೈತರ ಸಾಲ ಮನ್ನಾಕ್ಕೆ ಸಂಬಂಧಿಸಿದಂತೆ ಅರ್ಹತಾ ಪತ್ರಗಳನ್ನು ಪರಿಶೀಲನೆ ಮಾಡಲಾಗುತ್ತಿದ್ದು, ಅರ್ಹ ರೈತರು ಸರಿಯಾದ ದಾಖಲೆಯನ್ನು ನೀಡಿದರೆ, ದಾಖಲೆ ನೀಡಿದ 24 ಗಂಟೆಗಳಲ್ಲಿ ಸಾಲ ಮನ್ನಾ ಮಾಡಲಾಗುವುದು. ಈ ಬಗ್ಗೆ ಅನುಮಾನ ಬೇಡ.

ರಾಜ್ಯ ಬಜೆಟ್ ನಲ್ಲಿ ರೈತರ ಸಮುದಾಯಕ್ಕೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ 5 ಸಾವಿರ ಕೋಟಿ ರೂಪಾಯಿಗಳನ್ನು ನದಿ ನೀರನ್ನು ಎತ್ತಿ ಕೆರೆ ತುಂಬಿಸುವ ಏತ ನೀರಾವರಿ ಯೋಜನೆಗೆ ತೆಗೆದಿರಿಸುವ ಮೂಲಕ ಬಾಕಿ ಉಳಿದಿರುವ ರಾಜ್ಯದ ಎಲ್ಲ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ಕ್ರಮ ವಹಿಸಲಾಗಿದೆ. ಹೀಗಂತ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ  ತಿಳಿಸಿದ್ದಾರೆ.

ಹಾವೇರಿಯ ಹಿರೇಕೆರೂರ ಮತ್ತು ರಟ್ಟಿಹಳ್ಳಿ ತಾಲೂಕಿನ 88 ಕೆರೆಗಳನ್ನು ತುಂಗಭದ್ರಾ ನದಿಯಿಂದ ನೀರನ್ನು ಎತ್ತಿ ಸರ್ವಜ್ಞ ಕೆರೆ ತುಂಬಿಸುವ ಯೋಜನೆ ಸೇರಿದಂತೆ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ರೈತರು ನೆಮ್ಮದಿಯಿಂದ ಜೀವನ ನಡೆಸುವಂತೆ ಮಾಡುವುದು ನಮ್ಮ ಸರಕಾರದ ಪ್ರಮುಖ ಉದ್ದೇಶವಾಗಿದೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments