Publish Date: Tue, 07 Nov 2017 (13:25 IST)
Updated Date: Tue, 07 Nov 2017 (13:26 IST)
ನಾವು ಅಧಿಕಾರಕ್ಕೆ ಬಂದರೆ 24 ಗಂಟೆಯೊಳಗೆ ನಿಮ್ಮ ವಿರುದ್ಧದ ಆರೋಪಗಳ ಬಗ್ಗೆ ತನಿಖೆ ನಡೆಸ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಗುಡುಗಿದ್ದಾರೆ.
ಸಚಿವ ಎಂ.ಬಿ.ಪಾಟೀಲ್ ಕೇಂದ್ರ ಸರಕಾರ ಫೋನ್ ಕದ್ದಾಲಿಕೆ ಮಾಡುತ್ತಿದೆ ಎಂದು ಆರೋಪಿಸುತ್ತಿದ್ದಾರೆ. ಸುಮ್ಮ ಸುಮ್ಮನೆ ಆರೋಪ ಮಾಡುವುದು ಸರಿಯಲ್ಲ. ಕೇಂದ್ರ ಸರಕಾರ ಫೋನ್ ಕದ್ದಾಲಿಸುತ್ತಿದೆ ಎನ್ನುವುದಕ್ಕ ಸಾಕ್ಷ್ಯ ಕೊಡಿ ಎಂದು ಸವಾಲ್ ಹಾಕಿದ್ದಾರೆ.
ಬಿಜೆಪಿ ಮುಖಂಡ ಸೊಗಡು ಶಿವಣ್ಣ ಬಿಜೆಪಿ ಪರಿವರ್ತನೆ ಯಾತ್ರೆಗೆ ಬಾರದೆ ಆರೋಪ ಮಾಡುತ್ತಿದ್ದಾರೆ. ಇಂತಹ ಆರೋಪ ಮಾಡಿದಲ್ಲಿ ಪಕ್ಷದ ವರಿಷ್ಠರ ಗಮನಕ್ಕೆ ತರಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಕಳೆದ ನಾಲ್ಕು ವರ್ಷಗಳ ಕಾಲ ಕುಂಭಕರ್ಣ ನಿದ್ರೆಯಲ್ಲಿರುವ ಸಿಎಂ ಸಿದ್ದರಾಮಯ್ಯ, ಮನೆಗೆ ಹೋಗುವ ಸಂದರ್ಭದಲ್ಲಿ ಸಾಧನೆಪರ್ವ ಎನ್ನುತ್ತಿದ್ದಾರೆ. ಯಾವ ಸಾಧನೆ ಮಾಡಿದ್ದಾರೆ ಎನ್ನುವುದನ್ನು ಬಹಿರಂಗಪಡಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕಿಡಿಕಾರಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.