Select Your Language

Notifications

webdunia
webdunia
webdunia
webdunia

ನಮ್ಮ ಹೋರಾಟಕ್ಕೆ ಬೆದರಿ ಸರ್ಕಾರದಿಂದ ಸಾಲ ಮನ್ನಾ: ಯಡಿಯೂರಪ್ಪ

ನಮ್ಮ ಹೋರಾಟಕ್ಕೆ ಬೆದರಿ ಸರ್ಕಾರದಿಂದ ಸಾಲ ಮನ್ನಾ: ಯಡಿಯೂರಪ್ಪ
ಬೆಂಗಳೂರು , ಗುರುವಾರ, 22 ಜೂನ್ 2017 (13:49 IST)
ನಮ್ಮ ನಿರಂತರ ಹೋರಾಟಕ್ಕೆ ಹೆದರಿದ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರ ರೈತರ ಸಾಲ ಮನ್ನಾ ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
 
ಮಂಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು,  ಬಿಜೆಪಿ ಪಕ್ಷ ಸಾಲ ಮನ್ನಾ ಮಾಡುವಂತೆ ಆರಂಭದಿಂದಲೂ ಒತ್ತಾಯಿಸುತ್ತಿತ್ತು. ಹಲವಾರು ಹೋರಾಟಗಳನ್ನು ಪಕ್ಷದ ವತಿಯಿಂದ ಹಮ್ಮಿಕೊಳ್ಳಲಾಗಿತ್ತು ಎಂದರು.
 
ರೈತರ ಸಂಪೂರ್ಣ ಸಾಲಕ್ಕಾಗಿ ಸರಕಾರದ ವಿರುದ್ಧ ಬಿಜೆಪಿ ಪಕ್ಷ ನಿರಂತರ ಹೋರಾಟ ನಡೆಸಲಿದೆ. ಜುಲೈ 7,8,9 ರಂದು ಉದ್ದೇಶಿಸಲಾಗಿದ್ದ ಪ್ರತಿಭಟನೆಯನ್ನು ಹಿಂಪಡೆಯಲಾಗಿದೆ ಎಂದು ತಿಳಿಸಿದ್ದಾರೆ.
 
ಮುಂಬರುವ ದಿನಗಳಲ್ಲಿ ಸಿಎಂ ಸಿದ್ದರಾಮಯ್ಯ ಸರಕಾರದ ದುರಾಡಳಿತ, ಭ್ರಷ್ಟಾಚಾರ, ಸರ್ವಾಧಿಕಾರಿ ಧೋರಣೆಯ ವಿರುದ್ಧ ಬಿಜೆಪಿ ಹೋರಾಟ ನಡೆಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಡಾರ್ಜಿಲಿಂಗ್ ಹಿಂಸಾಚಾರ: ಕರ್ನಾಟಕ ಮೂಲದ ಯೋಧ ಹುತಾತ್ಮ