Publish Date: Thu, 29 Nov 2018 (14:15 IST)
Updated Date: Thu, 29 Nov 2018 (14:17 IST)
ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಸಚಿವ ಕೃಷ್ಣ ಭೈರೇಗೌಡ ಸ್ಪಷ್ಟನೆ ನೀಡಿದ್ದಾರೆ.
ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪಸೇರಿದಂತೆ, ಸಾಗರ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ, ಸಂಸದ ಬಿ.ವೈ ರಾಘವೇಂದ್ರ ಅವರು ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಆದರೆ ಮೂಲಗಳ ಪ್ರಕಾರ ಡಿಕೆಶಿಯನ್ನು ಬಿಜೆಪಿಗೆ ಸೆಳೆಯಲು ಹೈಕಮಾಂಡ್ ಸೂಚನೆಯಂತೆ ಬಿಎಸ್ ವೈ ಈ ಭೇಟಿ ನಡೆಸಿದ್ದಾರೆ ಎನ್ನಲಾಗಿದೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಸಚಿವ ಕೃಷ್ಣ ಭೈರೇಗೌಡ ಅವರು,’ ಯಡಿಯೂರಪ್ಪ ಅವರು ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಕ್ಕೆ ಯಾವುದೇ ವಿಶೇಷ ರಾಜಕೀಯ ಅರ್ಥ ಕಲ್ಪಿಸುವುದು ಬೇಡ. ಯಡಿಯೂರಪ್ಪನವರ ಕ್ಷೇತ್ರದ ನೀರಾವರಿ ಯೋಜನೆ ವಿಚಾರಕ್ಕೆ ಭೇಟಿ ಮಾಡಿರುವುದು. ಅವರೊಬ್ಬ ಜಿಲ್ಲಾ ಜನಪ್ರತಿನಿಧಿಯಾಗಿ ಮಾತುಕತೆ ನಡೆಸಿದ್ದಾರೆ’ ಎಂದು ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.