Select Your Language

Notifications

webdunia
webdunia
webdunia
webdunia

ಕೊಲೆಗಡುಕ ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ ಧಿಕ್ಕಾರ: ಯಡಿಯೂರಪ್ಪ

ಕೊಲೆಗಡುಕ ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ ಧಿಕ್ಕಾರ: ಯಡಿಯೂರಪ್ಪ
ಮಂಗಳೂರು , ಗುರುವಾರ, 7 ಸೆಪ್ಟಂಬರ್ 2017 (12:18 IST)
ಕೊಲೆಗಡುಕ ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ ಧಿಕ್ಕಾರ ಎಂದು ಕೂಗಿ ಭಾಷಣ ಆರಂಭಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ರಾಜ್ಯ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಶಾಂತಿಗೆ ಹೆಸರಾಗಿದ್ದ ಕರ್ನಾಟಕದಲ್ಲಿ ಅಶಾಂತಿ ಸೃಷ್ಟಿಸಿದ್ದೀರಿ. ಸಿದ್ದರಾಮಯ್ಯನವರೇ ನಿಮ್ಮ ರಾಜಕೀಯ ದೊಂಬರಾಟ ನಡೆಯುವುದಿಲ್ಲ.. ರಾಜ್ಯ ಸರಕಾರ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುತ್ತಿಲ್ಲ ಎಂದು ಗುಡುಗಿದರು. 
 
ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾದ ಸಚಿವ ಕೆ.ಜೆ.ಜಾರ್ಜ್ ಕೂಡಲೇ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಸಿಬಿಐ ತನಿಖೆ ಮುಕ್ತಾಯವಾಗುವವರೆಗೆ ತಮ್ಮ ಸಚಿವ ಸ್ಥಾನದಿಂದ ದೂರವಿರಬೇಕು. ಇಲ್ಲವಾದರೆ ಉಗ್ರ ಹೋರಾಟ ಹಮ್ಮಿಕೊಳ್ಳುತ್ತೇವೆ ಎಂದರು,
 
ಹಿರಿಯ ಪತ್ರಕರ್ತೆ, ವಿಚಾರವಾದಿ ಗೌರಿ ಲಂಕೇಶ್ ಹತ್ಯೆಗೆ ಹೊಣೆ ಯಾರು? ಕಲಬುರಗಿ ಹತ್ಯೆಯಾಗಿ ವರ್ಷಗಳೇ ಉರುಳಿದರೂ ಹಂತಕರನ್ನು ಬಂಧಿಸಲಾಗಿಲ್ಲ ಇದೆಂತಹ ಸರಕಾರ ನಿಮ್ಮದು ಎಂದು ಕಿಡಿಕಾರಿದರು.
 
ಕೊಲೆಗಡುಕರನ್ನು ರಕ್ಷಿಸುತ್ತಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ ನಮ್ಮ ಹೋರಾಟ ನಿರಂತರವಾಗಿ ಸಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.  
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಸಚಿವ ರಮಾನಾಥ್ ರೈಗೆ ಈ ಜನ್ಮದಲ್ಲಿ ಅನ್ನ ಸಿಗಲ್ಲ: ಆರ್.ಅಶೋಕ್