ಜೈಲಿನಲ್ಲಿನ ಅವ್ಯವಹಾರ ಬಯಲಿಗೆಳೆದಿದ್ದು ತಪ್ಪಾ?: ಸಿಎಂ ವಿರುದ್ಧ ಬಿಎಸ್‌ವೈ ವಾಗ್ದಾಳಿ

Webdunia
ಸೋಮವಾರ, 17 ಜುಲೈ 2017 (15:20 IST)
ಪರಪ್ಪನ ಅಗ್ರಹಾರ ಜೈಲಿನಲ್ಲಿನ ಅವ್ಯವಹಾರ ಬಯಲಿಗೆಳೆದಿರುವುದು ತಪ್ಪಾ? ತಮಿಳುನಾಡಿನ ಎಐಎಢಿಎಂಕೆ ನಾಯಕಿ ಶಶಿಕಲಾಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂದು ವರದಿ ಸಲ್ಲಿಸಿರುವುದು ತಪ್ಪಾ? ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ಜೈಲಿನಲ್ಲಿ ನಡೆಯುತ್ತಿರುವ ಅವ್ಯವಹಾರಗಳನ್ನು ನೋಡಿ ಕಣ್ಣುಮುಚ್ಚಿಕೊಂಡಿರಬೇಕಾಗಿತ್ತಾ? ಸತ್ಯ ವರದಿ ಮಾಡಿದ್ದಕ್ಕೆ ವರ್ಗಾವಣೆ ಶಿಕ್ಷೆ ಎನ್ನುವುದಾದರೇ ಮುಂದೆ ಯಾವ ಅಧಿಕಾರಿಯೂ ಪ್ರಾಮಾಣಿಕವಾಗಿ ವರದಿ ನೀಡುವುದಿಲ್ಲ ಎಂದು ಕಿಡಿಕಾರಿದ್ದಾರೆ. 
 
ರಾಜ್ಯ ಸರಕಾರ ಪ್ರಾಮಾಣಿಕ ಅಧಿಕಾರಿಗೆ ವರ್ಗಾವಣೆ ಮಾಡಿ ನಿಷ್ಠಾವಂತ ಅಧಿಕಾರಿಗಳ ನೈತಿಕ ಸ್ಥೈರ್ಯ ಕುಸಿಯುವಂತೆ ಮಾಡಿದೆ ಎಂದು ಗುಡುಗಿದ್ದಾರೆ. 
 
ಸರಕಾರ ಪ್ರಾಮಾಣಿಕರಿಗೆ ಶಿಕ್ಷೆ ಕೊಟ್ಟು ಭ್ರಷ್ಟರಿಗೆ ರಕ್ಷಣೆ ಕೊಡುತ್ತಿದೆ. ಇಂತಹ ಸರಕಾರಕ್ಕೆ ಜನತೆಯೇ ಮುಂದೆ ತಕ್ಕ ಶಿಕ್ಷೆ ನೀಡಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಎಂದು ಎಚ್ಚರಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ, ಈಚೆಗಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ದಂಪತಿ ದಾರುಣ ಸಾವು

ಖಮೇನಿ ಹತ್ಯೆಯನ್ನು ಖಂಡಿಸಿ, ಟ್ರಂಪ್ ವಿರುದ್ಧ ಕಿಡಿಕಾರಿದ ಸಿಎಂ ಸಿದ್ದರಾಮಯ್ಯ

ಖಮೇನಿ ಹತ್ಯೆ ಖಂಡಿಸಿ ಇಸ್ರೇಲ್‌ ಯುಎಸ್ ವಿರುದ್ಧ ಗುಡುಗಿದ ರಷ್ಯಾ ಅಧ್ಯಕ್ಚ ಪುಟಿನ್

ಖಮೇನಿ ಹತ್ಯೆಗೆ ಇದೀಗ ಪ್ರತೀಕಾರ ತೀರಿಸಿಕೊಳ್ಳುವ ಸಮಯ: ಇರಾನ್ ಅಧ್ಯಕ್ಷ

ಲಕ್ಷಾಂತರ ಮಂದಿ ಕಾರ್ಯಕರ್ತರು ನೋವಿನಲ್ಲೇ ದಿನ ಕಳೆಯುತ್ತಿದ್ದಾರೆ: ಈಶ್ವರಪ್

ಮುಂದಿನ ಸುದ್ದಿ
Show comments