Select Your Language

Notifications

webdunia
webdunia
webdunia
webdunia

ಇಂದಿನಿಂದ ಮೂರು ದಿನಗಳ ಕಾಲ ನೆರೆಪೀಡಿತ ಪ್ರದೇಶಗಳ ಪ್ರವಾಸ ಕೈಗೊಂಡ ಸಿಎಂ ಯಡಿಯೂರಪ್ಪ

ಇಂದಿನಿಂದ ಮೂರು ದಿನಗಳ ಕಾಲ ನೆರೆಪೀಡಿತ ಪ್ರದೇಶಗಳ ಪ್ರವಾಸ ಕೈಗೊಂಡ ಸಿಎಂ ಯಡಿಯೂರಪ್ಪ
ಬೆಂಗಳೂರು , ಗುರುವಾರ, 3 ಅಕ್ಟೋಬರ್ 2019 (11:39 IST)
ಬೆಂಗಳೂರು : ಇಂದಿನಿಂದ ಮೂರು ದಿನಗಳ ಕಾಲ ಸಿಎಂ ಬಿ.ಎಸ್​.ಯಡಿಯೂರಪ್ಪ ನೆರೆಪೀಡಿತ ಪ್ರದೇಶಗಳಾದ ಬೆಳಗಾವಿ, ಅಥಣಿ,ಬಾಗಲಕೋಟೆ, ವಿಜಯಪುರ, ಯಾದಗಿರಿಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.




ಇಂದು ಸಂಜೆ 4ಕ್ಕೆ ಸಿಎಂ ಬೆಳಗಾವಿಗೆ ತೆರಳಲಿದ್ದು, ಸಂಜೆ 4 ಗಂಟೆಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯಲಿದೆ. ಪ್ರವಾಹದ ಪರಿಹಾರ ಹಂಚಿಕೆ ಕುರಿತು ಸಿಎಂ ಬಿಎಸ್​ವೈ ಸಭೆ ನಡೆಸಲಿದ್ದಾರೆ ಎನ್ನಲಾಗಿದೆ.


ಅಲ್ಲದೇ ಈ ವೇಳೆ ಸಿಎಂ ಮುಜುಗರ ತಪ್ಪಿಸಲು ಜಿಲ್ಲಾಡಳಿತದಿಂದ ಪರಿಹಾರ ಹಂಚಿಕೆ ಮಾಡುತ್ತಿದ್ದಾರೆ ಎಂಬ ಮಾಹಿತಿ ಬಹಿರಂಗವಾಗಿದೆ. ಬೆಳಗಾವಿ ಜಿಲ್ಲೆಗೆ ರಾಜ್ಯ ಸರ್ಕಾರದಿಂದ 867 ಕೋಟಿ ಹಣ ಬಿಡುಗಡೆ ಆಗಿದೆ. ಪ್ರವಾಹಕ್ಕೆ ತುತ್ತಾದ ಪ್ರದೇಶಗಳಿಗೆ ಜಿಲ್ಲಾಡಳಿತದಿಂದ ಪರಿಹಾರ ವಿತರಣೆ ಮಾಡಲಾಗುತ್ತದೆ. ಈ ಬಗ್ಗೆ ಜಿಲ್ಲಾಧಿಕಾರಿ ಎಸ್ ಬಿ ಬೊಮ್ಮನಹಳ್ಳಿ ಪತ್ರಿಕಾ ಪ್ರಕಟಣೆ ನೀಡಿದ್ದಾರೆ ಎನ್ನಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಹೊಸ ಜಿಲ್ಲೆಯಾಗಬೇಕೆಂದು ಆಗ್ರಹಿಸಿ ಇಂದು ಜಮಖಂಡಿ ನಗರ ಬಂದ್‍