Select Your Language

Notifications

webdunia
webdunia
webdunia
webdunia

ಈಶ್ವರಪ್ಪಗೆ ಟಾಂಗ್ ನೀಡಲು ಬಿಎಸ್‌ವೈ ಸಜ್ಜು!

ಈಶ್ವರಪ್ಪಗೆ ಟಾಂಗ್ ನೀಡಲು ಬಿಎಸ್‌ವೈ ಸಜ್ಜು!
ಬೆಂಗಳೂರು , ಶುಕ್ರವಾರ, 26 ಆಗಸ್ಟ್ 2016 (13:26 IST)
ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪನವರಿಗೆ ಟಾಂಗ್ ನೀಡಲು ಸಜ್ಜಾಗಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪನವರು ಹಿಂದುಳಿದ ವರ್ಗಗಳ ಸಮಾವೇಶ ನಡೆಸಲು ಮುಂದಾಗಿದ್ದಾರೆ. 
 
ಹಿಂದುಳಿದ ವರ್ಗಗಳ ಸಮಾವೇಶದ ರೂಪುರೇಷೆಗಳನ್ನು ಸಿದ್ಧಪಡಿಸಲು ಅಗಸ್ಟ್ 30 ರಂದು ಬೆಂಗಳೂರಿನಲ್ಲಿ ಸಭೆ ನಡೆಸಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪನವರ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ಸಮಾವೇಶದ ದಿನಾಂಕ ಹಾಗೂ ಸ್ಥಳವನ್ನು ನಿಗದಿ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ.
 
ರಾಜ್ಯ ಬಿಜೆಪಿ ಪಾಳಯದಲ್ಲಿ ತಮ್ಮನ್ನು ಕಡೆಗಣಿಸಲಾಗುತ್ತದೆ ಎಂಬ ಕಾರಣಕ್ಕಾಗಿ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ಬ್ರಿಗೇಡ್ ಹೆಸರಿನ ಹೊಸ ಸಂಘಟನೆ ಹುಟ್ಟು ಹಾಕುವ ಮೂಲಕ ಪಕ್ಷದಲ್ಲಿ ತಮ್ಮ ಬಲ ಪ್ರದರ್ಶನ ಮಾಡಲು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ತಂತ್ರ ರೂಪಿಸಿದ್ದರು.
 
ಕುರುಬ ಸಮಾಜ ಸಂಘಟನೆ ಬಲವರ್ಧನೆಗಾಗಿ ಗಂಭೀರವಾಗಿ ಚಿಂತಿಸುತ್ತಿರುವ ಕೆ.ಎಸ್.ಈಶ್ವರಪ್ಪನವರು ಅಹಿಂದ ಸಮಾಜದ ಮುಖಂಡ ಮುಕುಡಪ್ಪ ಸೇರಿದಂತೆ ಹಲವು ನಾಯಕರೊಂದಿಗೆ ಸಭೆ ನಡೆಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಟ್ವಿಟರ್: ಬಿಗ್ ಬಿಯನ್ನು ಹಿಂದಿಕ್ಕಿದ ಮೋದಿ