Daily Horoscope
✕

ಯಾರನ್ನೂ ದೂರಲ್ಲ, ಕಾಲವೇ ಎಲ್ಲದಕ್ಕೂ ಉತ್ತರ ನೀಡುತ್ತದೆ ಎಂದ ಯಡಿಯೂರಪ್ಪ

Sampriya
ಶನಿವಾರ, 15 ಜೂನ್ 2024 (14:37 IST)
ಬೆಂಗಳೂರು: ನವದೆಹಲಿಗೆ ತೆರಳಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಬೆಂಗಳೂರಿಗೆ ಮರಳಿದ್ದಾರೆ. ಅವರ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣ ಮತ್ತು ಬಂಧನ ವಾರೆಂಟ್‌ ಪ್ರಹಸನದ ಕುರಿತು ಪ್ರತಿಕ್ರಿಯಿಸಿದ್ದಾರೆ.

ನಾನು ನಿಗದಿತ ಕಾರ್ಯಕ್ರಮದ ಅಂಗವಾಗಿ ದೆಹಲಿಗೆ ತೆರಳಿದ್ದೆ. ಮೊದಲೇ ನಾನು ಜೂನ್ 17ಕ್ಕೆ ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದೆ. ಆದರೂ ಕೂಡ ಅನಾವಶ್ಯಕವಾಗಿ ಗೊಂದಲ ಉಂಟು ಮಾಡುವ ಕೆಲಸ ಮಾಡಿದರು ಎಂದು ಬೆಂಗಳೂರಿನ ಕೇಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅವರು ಪ್ರತಿಕ್ರಿಯಿಸಿದರು.

ಈಗಾಗಲೇ ಹೈಕೋರ್ಟ್ ಸಹ ಬಂಧನ ಕುರಿತು ತಡೆಯಾಜ್ಞೆ ನೀಡಿದೆ. ಈಗಲೇ ನಾನು ಯಾರ ಮೇಲೂ ದೂರೋದಿಲ್ಲ. ಕಾಲವೇ ಎಲ್ಲದಕ್ಕೂ ಉತ್ತರ ನೀಡಲಿದೆ ಎಂದು ಹೇಳಿದರು.

ರಾಜ್ಯದ ಜನರಿಗೆ ವಾಸ್ತವ ಏನು ಎಂಬುದು ಗೊತ್ತಿದೆ. ಯಾರು ಕುತಂತ್ರ ಮಾಡಿದರೋ ಅವರಿಗೆ ಜನ ತಕ್ಕಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಕೆ ನೀಡಿದರು.

ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿ ಯಡಿಯೂರಪ್ಪ ವಿರುದ್ಧ ಬೆಂಗಳೂರಿನ ಸದಾಶಿವನಗರ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊನೆಗೂ ನಂದಿನಿ ಹಾಲು ಬೆಲೆ ಏರಿಕೆ ಬಗ್ಗೆ ತುಟಿ ಬಿಚ್ಚಿದ ಬಿಜೆಪಿ ನಾಯಕ ಬಿವೈ ವಿಜಯೇಂದ್ರ: ಹೇಳಿದ್ದೇನು ನೋಡಿ

ಕನ್ನಡ ರಾಜ್ಯೋತ್ಸವ ನಿಮಿತ್ತ ಕನ್ನಡ ಎಚ್ ಎಂಟಿ ವಾಚ್ ಬಿಡುಗಡೆ: ಬೆಲೆ ಎಷ್ಟು, ಎಲ್ಲಿ ಖರೀದಿಸಬಹುದು ನೋಡಿ

ಆಭರಣ ಪ್ರಿಯರಿಗೆ ಸಿಹಿ ಸುದ್ದಿ: ಬೆಂಗಳೂರಿನಲ್ಲಿ ಚಿನ್ನ ಹಾಗೂ ಬೆಳ್ಳಿ ದರದಲ್ಲಿ ಇಳಿಕೆ

ಆನೆ ನಡೆವಾಗ ತೋಳ, ನರಿ ಹೋಗುವಂತೆ: ಯಡಿಯೂರಪ್ಪ, ದೇವೇಗೌಡ ಭೇಟಿ ಕುರಿತು ಹರಿಪ್ರಸಾದ್ ವ್ಯಂಗ್ಯ

ನೀ ಯಾರಾದ್ರೆ ನಂಗೇನು… ನುಂಗಿಬಿಡುತ್ತೇನೆ ಎಂದು ಮನೆಯಂಗಳಕ್ಕೆ ಬಂದಿದ್ದ ಚಿರತೆ ನೋಡಿ ನಾಯಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ