ರಾಜ್ಯದಲ್ಲಿ ಜೆಡಿಎಸ್ ಪಕ್ಷ ನಿರ್ನಾಮ ಮಾಡಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಸಂಚು ರೂಪಿಸಿದ್ದಾರೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಗಂಭೀರವಾಗಿ ಆರೋಪಿಸಿದ್ದಾರೆ.
ಅಸ್ಕರ್ ಫರ್ನಾಡಿಸ್, ದಿಗ್ವಿಜಯ್ ಸಿಂಗ್ ಮತ್ತು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯವರು ರಾಜ್ಯದಿಂದ ವಿಧಾನ ಸಭೆ ಚುನಾವಣೆಗೆ ಮೂರನೇಯ ಅಭ್ಯರ್ಥಿಯನ್ನು ಕಣಕ್ಕಿಳಿಸುವುದು ಬೇಡ ಎಂದು ಸೂಚನೆ ನೀಡಿದ್ದರು. ಆದರೂ ಸಹ ಉದ್ದೇಶ ಪೂರ್ವಕವಾಗಿ ರಾಜ್ಯ ಕಾಂಗ್ರೆಸ್ ನಾಯಕರು ಮೂರನೇಯ ಅಭ್ಯರ್ಥಿಯನ್ನು ಕಣಕ್ಕಿಳಿಸಲು ರಣತಂತ್ರ ರೂಪಿಸಿದ್ದಾರೆ
ಈ ಚುನಾವಣೆ ಮೂಲಕ ರಾಜ್ಯದಲ್ಲಿ ಜೆಡಿಎಸ್ ಪಕ್ಷವನ್ನು ನಿರ್ನಾಮ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಪಕ್ಷದಿಂದ ಮೂರನೇಯ ಅಭ್ಯರ್ಥಿಯಾಗಿ ಕೆ.ಸಿ.ರಾಮಮೂರ್ತಿಯನ್ನು ಕಣಕ್ಕಿಳಿಸಿದ್ದಾರೆ ಎಂದು ದೇವೇಗೌಡರು ಆರೋಪಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ